ಸಂಗ್ರಹ ಚಿತ್ರ 
ದೇಶ

ಬಿಹಾರದಲ್ಲಿ ದೋಣಿ ದುರಂತ: 5 ಮಕ್ಕಳ ಜಲಸಮಾಧಿ

ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ...

ಬೆಗುಸರೈ: ಬಿಹಾರದ ಬೆಗುಸರೈ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಐವರು ಮಕ್ಕಳು ಜಲಸಮಾಧಿಯಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ಒಟ್ಟು 13 ಮಂದಿಯನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಕುಮಾರ್ ಸಂಘ್ ಗ್ರಾಮದ ಬಳಿಯ ಸಿಗ್ರೈಲಾ ತೊರೆಯಲ್ಲಿ ಮುಳುಗಿದ್ದು, ಮೂವರು ಬಾಲಕು ಈಜಿ ದಡ ಸೇರಿ ಪ್ರಾಣಾಪಾಯದಿಂದ  ಪಾರಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಐದು ಮೃತ  ದೇಹಗಳು ದೊರೆತಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ದೋಣಿಯಲ್ಲಿ ತೆರಳುತ್ತಿದ್ದವರೆಲ್ಲರೂ ಕುಮಾರ್ ಸಂಘ್ ಗ್ರಾಮದವರೆಂದು ತಿಳಿದುಬಂದಿದ್ದು, ಮೃತರನ್ನು ರೂಪಮ್ ಕುಮಾರಿ (8 ವರ್ಷ), ಅಭಿಷೇಕ್ ಕುಮಾರ್ (10 ವರ್ಷ), ಜಿತ್ನಿ ಕುಮಾರಿ (12  ವರ್ಷ), ಛೊಟ್ಕಿಕುಮಾರಿ (8 ವರ್ಷ) ಮತ್ತು ಸಚಿನ್ (10 ವರ್ಷ) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ತಂಡದ  ಅಧಿಕಾರಿಗಳು ಹೇಳುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!