ಮಹಿಳೆಯರಿಗೆ ಅವಮಾನ ಮಾಡಿದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ 
ದೇಶ

ಮಹಿಳೆಯರಿಗೆ ಅವಮಾನ ಮಾಡಿದ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಈಜಿಪ್ಟ್ ನ್ಯಾಯಾಲಯ

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಹಿಳೆಯರಿಗೆ ಅವಮಾನ ಮಾಡಿದ ವ್ಯಕ್ತಿಯೋಬ್ಬನಿಗೆ ಈಜಿಪ್ಟ್ ನ್ಯಾಯಾಲಯ 4 ವರ್ಷದ ಜೈಲು ಶಿಕ್ಷೆ ವಿಧಿಸಿದೆ.

ಕೈರೊ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಮಹಿಳೆಯರಿಗೆ ಅವಮಾನ ಮಾಡಿದ ವ್ಯಕ್ತಿಯೋಬ್ಬನಿಗೆ ಈಜಿಪ್ಟ್ ನ್ಯಾಯಾಲಯ 4 ವರ್ಷದ ಜೈಲು ಶಿಕ್ಷೆ ವಿಧಿಸಿದೆ.

ಈಜಿಪ್ಟ್ ನ ಅಂತರ್ಜಾಲ ಪತ್ರಿಕೆಯೊಂದರ ಮಾಹಿತಿಯ ಪ್ರಕಾರ, ಡೈರಿ ಆಫ್ ಎ ಕ್ರಷ್ಡ್ ಹಸ್ಬೆಂಡ್ ಎಂಬ ಫೇಸ್ ಬುಕ್ ಪೇಜ್ ನ್ನು ನಿರ್ವಹಣೆ ಮಾಡುತ್ತಿದ್ದ ಎಲ್-ಸೋಬ್ಕಿ ಎಂಬ ವ್ಯಕ್ತಿ ಸಿಬಿಸಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಈಜಿಪ್ಟ್ ನ ಬಹುತೇಕ ಮಹಿಳೆಯರು ತಮ್ಮ ಗಂಡದಿರಿಗೆ ಮೋಸ ಮಾಡುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ. ಈ ಹೇಳಿಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಫೇಸ್ ಬುಕ್ ಪೇಜ್ ನಿರ್ವಹಣೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿತ್ತು. ಮಹಿಳೆಯರಿಗೆ ಅವಮಾನ ಮಾಡಿ ಸಾರ್ವಜನಿಕ ಶಾಂತಿಯನ್ನು ಕದಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಲ್-ಸೋಬ್ಕಿ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಎಲ್-ಸೋಬ್ಕಿ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ, ಮಹಿಳೆಯರಿಗೆ ನೋವುಂಟುಮಾಡುವ ಉದ್ದೇಶ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT