ಜೆಎನ್‌ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು 
ದೇಶ

ಜೆಎನ್‌ಯು ವಿವಾದ: ತನಿಖೆಯಿಂದ 21 ವಿದ್ಯಾರ್ಥಿಗಳ ತಪ್ಪು ಸಾಬೀತು

ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜವಾಹರ್ ಲಾಲ್ ನೆಹರು(ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಕಾರ್ಯಕ್ರಮದಲ್ಲಿ ವಿವಿಯ 21 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂದು...

ನವದೆಹಲಿ: ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಜವಾಹರ್ ಲಾಲ್ ನೆಹರು(ಜೆಎನ್‌ಯು) ವಿಶ್ವವಿದ್ಯಾಲಯದಲ್ಲಿನ ದೇಶದ್ರೋಹ ಕಾರ್ಯಕ್ರಮದಲ್ಲಿ ವಿವಿಯ 21 ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆಂದು ವಿವಿಯ ತನಿಖಾ ಸಮಿತಿ ವರದಿ ನೀಡಿದೆ.

ಪ್ರಕರಣ ಕುರಿತಂತೆ ತನಿಖೆ ನಡೆಸಲು ವಿಶ್ವವಿದ್ಯಾಲಯವು ಉನ್ನತ ಮಟ್ಟದ ಆಂತರಿಕ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ತನ್ನ ತನಿಖೆಯ ವರದಿಯನ್ನು ವಿವಿಯ ಉಪಕುಲಪತಿ ಎಂ.ಜಗದೀಶ್ ಕುಮಾರ್ ಅವರಿಗೆ ಸಲ್ಲಿಸಿದೆ.

ವಿಶ್ವವಿದ್ಯಾಲಯದ ನಿಯಮಗಳಿಗೆ ವಿರುದ್ಧವಾಗಿ ನವೆಂಬರ್ 9ರಂದು ಅಫ್ಜಲ್ ಗುರು ಪರವಾಗಿ ವಿದ್ಯಾರ್ಥಿಗಳು ಕಾರ್ಯಕ್ರಮ ನಡೆಸಿದ್ದು ನಿಜ ಎಂದು ತನಿಖಾ ಸಮಿತಿ ಒಮ್ಮತವಾಗಿ ಅಭಿಪ್ರಾಯಪಟ್ಟಿದೆ.

ಉಮರ್ ಖಾಲಿದ್, ಅನಿರ್ಬನ್ ಭಟ್ಟಾಚಾರ್ಯ, ಅಶುತೋಷ್, ರಾಮನಾಗ ಮೊದಲಾದ ವಿದ್ಯಾರ್ಥಿಗಳಿಗೆ ವಿವಿ ಶೋಕಾಸ್ ನೋಟೀಸ್ ಜಾರಿ ಮಾಡುವ ನಿರೀಕ್ಷೆ ಇದೆ.

ಇದೇ ವೇಳೆ, ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರು ಈ ಸಮಿತಿಯ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ದಲಿತ ಸದಸ್ಯರಿಲ್ಲದ ಈ ತನಿಖಾ ಸಮಿತಿಯ ವರದಿಯನ್ನು ತಾವೆಲ್ಲರೂ ಒಪ್ಪಿಕೊಳ್ಳುವುದಿಲ್ಲ ಎಂದು ಕನ್ಹಯ್ಯ ಕೆಲ ದಿನಗಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್