ಅರುಣ್ ಜೇಟ್ಲಿ (ಸಂಗ್ರಹ ಚಿತ್ರ)
ನವದೆಹಲಿ: ರಾಜಧಾನಿ ಹೈದರಾಬಾದ್ ನ್ನು ಕಳೆದುಕೊಂಡಿದ್ದಕ್ಕಾಗಿ ಆಂಧ್ರಪ್ರದೇಶಕ್ಕೆ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ಆಂಧ್ರಪ್ರದೇಶ ಸಂಸದರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಜೇಟ್ಲಿ, ಆಂಧ್ರಪ್ರದೇಶ ವಿಭಜನೆಯಾದ ಸಂದರ್ಭದಲ್ಲಿ ನೀಡಲಾದ ಎಲ್ಲಾ ಭರವಸೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದರು.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು, ಎರಡು ವರ್ಷಗಳ ಹಿಂದೆ ಆಂಧ್ರಪ್ರದೇಶವನ್ನು ವಿಭಜನೆ ಮಾಡಿ ತೆಲಂಗಾಣ ರಾಜ್ಯ ರಚನೆ ಮಾಡಲಾಯಿತು. ಈ ವೇಳೆ ರಾಜಧಾನಿ ಹೈದರಾಬಾದ್ ಅನ್ನು ತೆಲಂಗಾಣಕ್ಕೆ ಬಿಟ್ಟುಕೊಡಲಾಯಿತು. ಇದರಿಂದ ಆಂಧ್ರಪ್ರದೇಶ ಆರ್ಥಿಕವಾಗಿ ಭಾರಿ ನಷ್ಟ ಅನುಭವಿಸುತ್ತಿದೆ ಎಂದರು.
ಇದಕ್ಕೆ ಧ್ವನಿಗೂಡಿಸಿದ ಜಿಡಿ ಸಲೀಮ್, ರೇಣುಕಾ ಚೌಧರಿ ಹಾಗೂ ಕೆವಿಪಿ ರಾಮಚಂದ್ರ ರಾವ್ ಸೇರಿದಂತೆ ಕೆಲವು ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸರ್ಕಾರದ ಇದಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ಪ್ರತಿಭಟಿಸಿದರು,
ಈ ವೇಳೆ, ಆಂಧ್ರಪ್ರದೇಶಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಜೇಟ್ಲಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics