'ಭಾರತ್ ಮಾತಾ ಕಿ ಜೈ' ಹೇಳಲು ನಿರಾಕರಿಸಿದ್ದ ಓವೈಸಿಯಿಂದ 'ಜೈ ಹಿಂದ್' ಘೋಷಣೆ
ನನ್ನ ಕುತ್ತಿಗೆ ಮೇಲೆ ಕತ್ತಿಯಿಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳಲ್ಲ ಎಂದಿದ್ದ ವಿವಾದಾತ್ಮಕ ಮುಸ್ಲಿಂ...
ಹೈದರಾಬಾದ್: ನನ್ನ ಕುತ್ತಿಗೆ ಮೇಲೆ ಕತ್ತಿಯಿಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳಲ್ಲ ಎಂದಿದ್ದ ವಿವಾದಾತ್ಮಕ ಮುಸ್ಲಿಂ ನಾಯಕ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈ ಈಗ ಜೈ ಹಿಂದ್ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ.
ನೂತನ ತಲೆಮಾರು ಮದರ್ ಇಂಡಿಯಾ ಎಂದು ಘೋಷಣೆ ಕೂಗುವ ಬಗ್ಗೆ ಚಿಂತನೆ ಮಾಡಬೇಕು ಎಂಬ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಓವೈಸಿ, ನನ್ನ ಕುತ್ತಿಗೆ ಮೇಲೆ ಕತ್ತಿ ಹಿಡಿದು ಆ ಘೋಷಣೆ ಕೂಗು ಅಂದರೂ ನಾನು ಕೂಗಲ್ಲ ಎಂದಿದ್ದರು.
ಇದಾದ ಮಾರನೇ ದಿನವೇ ಅಲಹಬಾದ್ ಕೋರ್ಟ್ ನಲ್ಲಿ ತನ್ನ ವಿರುದ್ಧದ ಪ್ರಕರಣ ದಾಖಲಾಗಿರುವ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, 'ನನಗೆ ಕೋರ್ಟ್ ಮೇಲೆ ಸಂಪೂರ್ಣ ನಂಬಿಕೆ ಇದೆ. ನನಗೆ ನ್ಯಾಯ ಸಿಕ್ಕೆ ಸಿಗುತ್ತೆ. ಜೈ ಹಿಂದ್' ಎಂದು ಘೋಷಣೆ ಕೂಗಿರುವುದಾಗಿ ಎಎನ್ಐ ವರದಿ ಮಾಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.