ಕನ್ಹಯ್ಯ ಕುಮಾರ್ 
ದೇಶ

ಕನ್ಹಯ್ಯ ಕುಮಾರ್ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕನ್ಹಯ್ಯ ಕುಮಾರ್ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರು, ಯಾವುದೇ ದೇಶ ವಿರೋಧಿ ಘೋಷಣೆ ಕೂಗಿದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನು ಸುವ್ಯವಸ್ಥೆ ಇದೆ. ಈ ಬಗ್ಗೆ ನೀವು ಚಿಂತಿಸುವ ಅಗತ್ಯ ಇಲ್ಲ ಎಂದು ಅರ್ಜಿದಾರರಿಗೆ ಹೇಳಿದರು.
ದೇಶ ದ್ರೋಹದ ಪ್ರಕರಣದಡಿ ಬಂಧನಕ್ಕೊಳಗಾಗಿ, ಈಗ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕನ್ಹಯ್ಯ ಕುಮಾರ್ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನ್ಯಾಯದ ದೃಷ್ಟಿಯಿಂದ ಗುಪ್ತಚಲ ಇಲಾಖೆಯಿಂದ ಹೆಚ್ಚಿನ ತನಿಖೆಗೆ ಸೂಚಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ದೇವ್ ದತ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT