ಛಗನ್‌ ಭುಜಬಲ್‌ 
ದೇಶ

ಮಹಾರಾಷ್ಟ್ರ ಸದನ ಹಗರಣ: ಛಗನ್‌ ಭುಜಬಲ್‌ 2 ದಿನ ಇಡಿ ವಶಕ್ಕೆ

ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ...

ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್‌ ಭುಜಬಲ್‌ ಅವರನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ಒಪ್ಪಿಸಲಾಗಿದೆ. 
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್‌ ಅವರನ್ನು ನಿನ್ನೆ ರಾತ್ರಿ ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಸುಮಾರು 10 ಗಂಟೆಗಳ ವಿಚಾರಣೆ ಬಳಿಕ ಇಂದು ಅವರನ್ನು ಮುಂಬಯಿ ಸೆಶನ್ಸ್‌ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿದ್ದರು. ಅಲ್ಲದೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿದ್ದಾರೆ.
ವಿಚಾರಣೆ ನಡೆಸಿದ ಕೋರ್ಟ್, ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ, Sensex ಕುಸಿತ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT