ಬಾಹುಬಲಿ ಚಿತ್ರದಲ್ಲಿ ನಟ ಪ್ರಭಾಸ್ 
ದೇಶ

ಬಾಹುಬಲಿ ನಟ ಪ್ರಭಾಸ್ ಸಹೋದರನಿಗೆ 1 ವರ್ಷ ಜೈಲು ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಸಹೋದರನಿಗೆ ಇಲ್ಲಿನ ನ್ಯಾಯಾಲಯ ಮಂಗಳವಾರ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ತಿಳಿದುಬಂದಿದೆ...

ಹೈದರಾಬಾದ್: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಸಹೋದರನಿಗೆ ಇಲ್ಲಿನ ನ್ಯಾಯಾಲಯ ಮಂಗಳವಾರ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ ಎಂದು ತಿಳಿದುಬಂದಿದೆ.

ಪ್ರಭಾಸ್ ಸಹೋದರ ಪ್ರಬೋಧ್ ಅವರು ಉದ್ಯಮಿಯೊಬ್ಬರಿಗೆ ರು.43 ಲಕ್ಷದ ಚೆಕ್ ವೊಂದನ್ನು ನೀಡಿದ್ದರು. ಆದರೆ, ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದ ಕಾರಣ ಚೆಕ್ ಬೌನ್ಸ್ ಆಗಿದೆ. ಈ ಹಿನ್ನಲೆಯಲ್ಲಿ ಪ್ರಬೋಧ್ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಇದರಂತೆ ನಿನ್ನೆ ವಿಚಾರಣೆ ನಡೆಸಿರುವ ರಾಜೇಂದ್ರನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ತೀರ್ಪನ್ನು ಹೊರಹಾಕಿದೆ.

ನ್ಯಾಯಾಲಯದ ತೀರ್ಪಿನ ಪ್ರಕಾರ ಇದೀಗ ಪ್ರಬೋಧ್ ಅವರಿಗೆ 1 ವರ್ಷ ಸೆರೆವಾಸ ಸಿಕ್ಕಿದ್ದು, ತೀರ್ಪು ಬಂದ 2 ತಿಂಗಳೊಳಗಾಗಿ ರು. 80 ಲಕ್ಷವನ್ನು ಉದ್ಯಮಿಗೆ ನೀಡುವಂತೆ ತಿಳಿಸಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel