ಗಾಯಗೊಂಡಿರುವ ಕುದುರೆಗೆ ಹುಲ್ಲು ತಿನ್ನಿಸುತ್ತಿರುವ ಪೊಲೀಸ್(ಚಿತ್ರ ಕೃಪೆ: ಪಿಟಿಐ)
ಡೆಹ್ರಾಡೂನ್: ಅಮಾಯಕ ಪ್ರಾಣಿ ಕುದುರೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಗಣೇಶ್ ಜೋಶಿ ಎಂಬುವವರ ವಿರುದ್ಧ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕ ಗಣೇಶ್ ಜೋಶಿ ಪೊಲೀಸ್ ಕುದುರೆ ಕಾಲು ಮುರಿದಿದ್ದಾರೆ. ಕುದುರೆಗೆ ಹೊಡೆಯುತ್ತಿರುವ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಶಾಸಕನ ಈ ವರ್ತನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಶಾಸಕನ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಆಡಳಿತಾರೂಢ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಹಲವು ಪ್ರಾಣಿ ದಯಾ ಸಂಘಟನೆಯ ಕಾರ್ಯಕರ್ತರು ಶಾಸಕರ ವಿರುದ್ಧ ದೂರು ದಾಖಲಿಸಿದ್ದಾರೆ.