ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನ ಕೊಲೆ 
ದೇಶ

ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನ ಕೊಲೆ

ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ...

ರೊಹ್ಟಕ್: ಹರಿಯಾಣದಲ್ಲಿ ಮತ್ತೊಬ್ಬ ರಾಷ್ಟ್ರೀಯ ಕಬಡ್ಡಿ ಆಟಗಾರನನ್ನು ಹತ್ಯೆ ಮಾಡುವ ಮೂಲಕ ದುಷ್ಕರ್ಮಿಗಳು ತಮ್ಮ ಅಟ್ಟಹಾಸವನ್ನು ಮರೆದಿದ್ದಾರೆ.

ಸುಖ್ವಿಂದರ್ ನರ್ವಾಲ್ ಹತ್ಯೆಯಾದ ಆಟಗಾರನಾಗಿದ್ದು, ಇಂದು ಬೆಳಗ್ಗೆ ಸುಖ್ವಿಂದರ್ ಕಬಡ್ಡಿ ಅಭ್ಯಾಸ ಮುಗಿಸಿ ಮನೆಗೆ ಬರುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಏಕಾಏಕಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಸುಖ್ವಿಂದರ್ ನೆಲಕ್ಕೆ ಬೀಳುತ್ತಿದ್ದಂತೆ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾರೆ.

ಈ ಹತ್ಯೆಯ ದೃಶ್ಯವೀಗ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಆದರೆ, ಇಲ್ಲಿಯವರಗೆ ದುಷ್ಕರ್ಮಿಗಳ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವ ಪ್ರಕಾರ ಕೆಲವು ದಿನಗಳ ಹಿಂದಷ್ಟೇ ಇಂತಹುದ್ದೇ ಮತ್ತೊಬ್ಬ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಕಬಡ್ಡಿ ಆಟಗಾರನಾಗಿದ್ದ ದೀಪಕ್ ಕುಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅಂತಹುದೇ ಘಟನೆ ಮರುಕಳಿಸಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ