ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಶೀಘ್ರದಲ್ಲೇ ಮೇಡಂ ತುಸಾಡ್ ಮ್ಯೂಸಿಯಂನಲ್ಲಿ ಪ್ರಧಾನಿ ಮೋದಿಯ ಮೇಣದ ಪ್ರತಿಮೆ ಅನಾವರಣ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವ ನಾಯಕ ಎಂದು ಪರಿಗಣಿಸಲಾಗಿದ್ದು, ಶೀಘ್ರದಲ್ಲೇ ಲಂಡನ್ ನ

ನರೇಂದ್ರ ಮೋದಿ
Lingaraj Badiger
Updated On : 16 Mar 2016, 4:49 am
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವ ನಾಯಕ ಎಂದು ಪರಿಗಣಿಸಲಾಗಿದ್ದು, ಶೀಘ್ರದಲ್ಲೇ ಲಂಡನ್ ನ ಮೇಡಂ ತುಸಾಡ್ ಮ್ಯೂಸಿಯಂನಲ್ಲಿ ಅವರ ಮೇಣದ ಪ್ರತಿಮೆ ಅನಾವರಣಗೊಳ್ಳುವ ಸಾಧ್ಯತೆ ಇದೆ.
ಇತ್ತೀಚಗಷ್ಟೇ ಪಿಆರ್ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯ ಪ್ರಕಾರ. ಫೇಸ್ ಬುಕ್ ನಲ್ಲಿ ಪ್ರಧಾನಿ ಮೋದಿ ಅವರು ವಿಶ್ವದ ಎರಡನೇ ಅತ್ಯಂತ ಜನಪ್ರಿಯ ನಾಯಕ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಜಾಗತಿಕವಾಗಿ ಭಾರತ ಗುರುತಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಡಿಜಿಟಲ್ ಇಂಡಿಯಾ, ಕ್ಲೀನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಹಾಗೂ ಸ್ಕಿಲ್ ಇಂಡಿಯಾ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

Advertisement

Advertisement

'ಮೋದಿ ಕುರ್ತಾ' ಎಂಬ ವಿಶೇಷ ಉಡುಗೆಯಿಂದಲೇ ಪ್ರಧಾನಿ ಮೋದಿ ಅವರು ಗುರುತಿಸಿಕೊಂಡಿದ್ದು, ಈಗ ಅದೇ ಉಡುಗೆಯಲ್ಲಿ ಮೇಡಂ ತುಸಾಡ್ ಮ್ಯೂಸಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments