ದ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ 
ದೇಶ

ಓವೈಸಿ ನಾಲಿಗೆ ಕತ್ತರಿಸಿದವರಿಗೆ ರು.21 ಸಾವಿರ ಬಹುಮಾನ

'ಭಾರತ್ ಮಾತಾ ಕಿ ಜೈ' ಎಂದು ಕೂಗುವುದಿಲ್ಲ ಎಂದಿದ್ದ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿಯವರ ನಾಲಿಗೆ ಕತ್ತರಿಸಿದವರಿಗೆ ರು.21 ಸಾವಿರ ಬಹುಮಾನ ನೀಡುವುದಾಗಿ

ಲಖನೌ: 'ಭಾರತ್ ಮಾತಾ ಕಿ ಜೈ' ಎಂದು ಕೂಗುವುದಿಲ್ಲ ಎಂದಿದ್ದ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿಯವರ ನಾಲಿಗೆ ಕತ್ತರಿಸಿದವರಿಗೆ ರು.21 ಸಾವಿರ ಬಹುಮಾನ ನೀಡುವುದಾಗಿ ಉತ್ತರಪ್ರದೇಶದ ವಿದ್ಯಾರ್ಥಿ ಸಂಘದ ನಾಯಕನೊಬ್ಬ ಘೋಷಣೆ ಮಾಡಿದ್ದಾನೆ.

ಓವೈಸಿಯವರ ಹೇಳಿಕೆ ವಿರುದ್ಧ ಕಿಡಿಕಾರಿರಿರುವ ಮೀರುತ್ ಕಾಲೇಜಿನ ಮಾಜಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದುಷ್ಯಂತ್ ತೋಮರ್ ಘೋಷಣೆ ಮಾಡಿದ ವ್ಯಕ್ತಿಯಾಗಿದ್ದಾನೆ.

ಓವೈಸಿಯವರ ಈ ಹೇಳಿಕೆ ಬರೀ ದೇಶ ವಿರೋಧಿ ಎಂಬುದನ್ನಷ್ಟೇ ತೋರಿಸುತ್ತಿಲ್ಲ, ಅವರು ದೇಶಭಕ್ತರಲ್ಲ ಎಂಬುದು ಕೂಡ ಇದರಲ್ಲಿ ತಿಳಿದುಬರುತ್ತಿದೆ. ಹೀಗಾಗಿ ತೋಮರ್ ಅವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ತೆಗೆದುಹಾಕಬೇಕೆಂದು ಆಗ್ರಹಿಸಿದ್ದಾರೆ.
ದುಷ್ಯಂತ್ ತೋಮರ್ 2014-15ರ ಮೀರುತ್ ಕಾಲೇಜಿನಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಬಿಜೆಪಿಗೆ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಲ್ಲಿ ರಾಜ್ಯ ಕಾರ್ಯನಿರ್ವಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಈ ಹಿಂದೆ ಜೆಎನ್ ಯು ಪ್ರಕರಣಕ್ಕೆ ಸಂಬಂಧಿಸಿ ಆರ್ ಎಸ್ಎಸ್ ಸಭೆಯಲ್ಲಿ ಮಾತನಾಡಿದ್ದ ಮೋಹನ್ ಭಾಗವತ್ ಅವರು, ಜೆಎನ್ ಯು ಆವರಣದಲ್ಲಿ ದೇಶ ವಿರೋಧಿ ಘೋಷಣೆಗಳು ಕೇಳಿಬಂದಿವೆ. ಪ್ರತಿಯೊಬ್ಬರೂ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗವಂತಾಗಬೇಕು. ಯುವಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಇದು ಪೂರಕವಾಗಬೇಕೆಂದು ಹೇಳಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಓವೈಸಿ, ನನ್ನ ಕುತ್ತಿಗೆ ಮೇಲೆ ಚೂರಿ ಇಟ್ಟರೂ ನಾನು ಭಾರತ್ ಮಾತಾ ಕಿ ಜೈ ಎಂದು ಹೇಳುವುದಿಲ್ಲ. ಘೋಷಣೆಯನ್ನು ಕೂಗಿ, ದೇಶಭಕ್ತಿ ಸಾಬೀತುಪಡಿಸಬೇಕೆಂದು ಸಂವಿಧಾನದಲ್ಲಿ ಎಲ್ಲೂ ಹೇಳಿಲ್ಲ. ಹಾಗಾಗಿ ಕಾನೂನು ಉಲ್ಲಂಘನೆಯ ಪ್ರಶ್ನೆ ಇಲ್ಲಿ ಹುಟ್ಟುವುದಿಲ್ಲ. ಈ ನಿಲುವಿಗೆ ನಾನು ಬದ್ಧನಾಗಿದ್ದೇನೆ ಯಾವುದೇ ಕಾರಣಕ್ಕೂ ಘೋಷಣೆ ಕೂಗುವುದಿಲ್ಲ.

ನಾನು ಈ ದೇಶದ ಸಂವಿಧಾನವನ್ನು ಪಾಲಿಸುತ್ತೇನೆ. ಆದರೆ, ಘೋಷಣೆ ಕೂಗುವಂತೆ ಯಾರಿಗೂ ಒತ್ತಾಯ ಮಾಡುವುದಿಲ್ಲ. ಆರ್ ಎಸಎಸ್ ತಮ್ಮ ಸಿದ್ಧಾಂತವನ್ನು ಜನರ ಮೇಲೆ ಹೇರಲು ಯತ್ನಿಸುತ್ತಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ನಾನಂತೂ ಘೋಷಣೆ ಕೂಗುವುದಿಲ್ಲ ಈಗ ಏನು ಮಾಡುತ್ತೀರಿ ಭಾಗವತ್ ಸಾಬ್ ಎಂದು ಓವೈಸಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ