ಲಖನೌ: ನೋಯ್ಡಾದಲ್ಲಿ ನಿವೇಶನ ಹಂಚಿಕೆ ವೇಳೆ ಅಕ್ರಮವೆಸಗಿರುವ ಆರೋಪದಡಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ರಾಜೀವ್ ಕುಮಾರ್ ಸಿಬಿಐ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಸಿಬಿಐ ವಿಶೇಷ ಕೋರ್ಟ್ ನ ನ್ಯಾಯಾಮೂರ್ತಿ ಜಿ.ಶ್ರೀದೇವಿ ಅವರು ರಾಜೀವ್ ಕುಮಾರ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದ್ದಾರೆ.
ರಾಜೀವ್ ಕುಮಾರ್ ಅವರು ರಾಜ್ಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ನೋಯ್ಡಾ ನಿವೇಶನ ಹಂಚಿಕೆ ವೇಳೆ ಅಕ್ರಮವೆಸಗಿದ್ದರು ಎಂದು ಆರೋಪ ಮಾಡಲಾಗಿತ್ತು.