ನವದೆಹಲಿ: ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಅತ್ಯಂತ ಕಠಿಣವಾಗಿದ್ದವು ಎಂದು ವಿದ್ಯಾರ್ಥಿಗಳ ಪೋಷಕರು ಮನವಿ ಮಾಡಿರುವ ಹಿನ್ನಲೆಯಲ್ಲಿ ಸಿಬಿಎಸ್ ಇ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್) ಪರಿಹಾರ ಕ್ರಮಕೈಗೊಳ್ಳುವುದಾಗಿ ತಿಳಿಸಿದೆ.
12ನೇ ತರಗತಿ ಗಣಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಪತ್ರಿಕೆಗಳ ಹೇಳಿಕೆಗಳನ್ನು ತಿರಸ್ಕರಿಸಿದೆ. ಅಷ್ಟೇ ಅಲ್ಲದೇ, ಗಣಿತ ಉತ್ತರ ಪತ್ರಿಕೆ ಮೌಲ್ಯ ಮಾಪನ ಆರಂಭಕ್ಕೆ ಮೊದಲು ಕೆಲವು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಬಿಎಸ್ ಇ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸ್ಪಷ್ಟನೇ ನೀಡಿದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, 12ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದರ ಬಗ್ಗೆ ಪರಿಶೀಲಿಸಲಾಯಿತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಪತ್ರಿಕೆಗಳಲ್ಲಿ ಮಾಡಲಾಗಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ.