ಛಗನ್‌ ಭುಜಬಲ್‌ 
ದೇಶ

ಮಹಾ ಸದನ ಹಗರಣ: ಭುಜಬಲ್ ಗೆ ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನ

ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ...

ಮುಂಬೈ: ಮಹಾರಾಷ್ಟ್ರ ಸದನ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ನಾಯಕ ಛಗನ್‌ ಭುಜಬಲ್‌ ಅವರನ್ನು ಮಾರ್ಚ್ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ಹಣ ದುರ್ಬಳಕೆ ಆರೋಪದ ಮೇಲೆ ಭುಜಬಲ್‌ ಅವರನ್ನು ಮಾರ್ಚ್ 14ರಂದು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಮುಂಬಯಿ ಸೆಶನ್ಸ್‌ ಕೋರ್ಟಿನ ವಿಶೇಷ ಪಿಎಂಎಲ್‌ಎ ಕೋರ್ಟ್ ಗೆ ಹಾಜರುಪಡಿಸಿ, ಎರಡು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದರು. 
ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿಯನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಇಂದು ಮತ್ತೆ ಪಿಎಂಎಲ್ ಎ ಕೋರ್ಟ್ ಗೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಜಾರಿ ನಿರ್ದೇಶನಲಾಯವು ಭುಜಬಲ್‌, ಅವರ ಪುತ್ರ ಹಾಗೂ ಸೋದರ ಸಂಬಂಧಿ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಮಹಾರಾಷ್ಟ್ರ ಸದನ ಹಗರಣ ಮತ್ತು ಕಲೀನಾ ಭೂಕಬಳಿಕೆ ಹಗರಣಕ್ಕೆ ಸಂಬಂಧಿಸಿ ಇವರ ವಿರುದ್ಧ ಕೇಸು ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

SCROLL FOR NEXT