ದೇಶ

ಮಾ.19 ರಿಂದ ಬಿಜೆಪಿ ಕಾರ್ಯಕಾರಿಣಿ ಸಭೆ, ರಾಷ್ಟ್ರೀಯತೆ, ಬಜೆಟ್ ಕುರಿತು ನಿರ್ಣಯ ಸಾಧ್ಯತೆ

Srinivas Rao BV

ನವದೆಹಲಿ: ಮಾ.19 ರಿಂದ ಎರಡು ದಿನಗಳ ವರೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಪ್ರಸಕ್ತ ರಾಜಕೀಯ ಸನ್ನಿವೇಶಕ್ಕೆ ಪ್ರತಿಕ್ರಿಯಿಸುವ ಬಗ್ಗೆ ಹಾಗೂ ಕೇಂದ್ರ ಸರ್ಕಾರದ ಬಜೆಟ್ ವಿಷಯಗಳ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.

ಕಾರ್ಯಕಾರಿಣಿ ಸಭೆಯಲ್ಲಿ ಜೆಎನ್ ಯು ವಿವಾದ ವಿಷಯದಲ್ಲಿ ಕಾಂಗ್ರೆಸ್- ಸಿಪಿಐ(ಎಂ) ನ್ನು ಎದುರಿಸುವ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ. ಇದರೊಂದಿಗೆ ರಾಷ್ಟ್ರೀಯತೆ  ಬಗ್ಗೆಯೂ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇಶ್ರಾತ್ ಜಹಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿ ಸರ್ಕಾರದ ಬಗ್ಗೆ ತಪ್ಪು ಮಾಹಿತಿಗಳನ್ನು ನೀಡುತ್ತಿರುವುದು ಎರಡು ದಿನಗಳ ಸಭೆಯಲ್ಲಿ ಬಿಜೆಪಿ ಕೈಗೊಳ್ಳಲಿರುವ ನಿರ್ಣಯಗಳ ಕೇಂದ್ರಬಿಂದುವಾಗಲಿದೆ ಎಂಬ ನಿರೀಕ್ಷೆ ಇದ್ದು  ಕಾರ್ಯಕಾರಿಣಿ ಸಭೆಯಲ್ಲಿ ಪಂಚರಾಜ್ಯಗಳ ಚುನಾವಣೆ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಯಲಿದೆ. ಕಾರ್ಯಕಾರಣಿ ಸಭೆಯ ಮುಕ್ತಾಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.

SCROLL FOR NEXT