ಮುಳುಗುತ್ತಿದ್ದ ಹಡಗಿನಿಂದ 8 ಮಂದಿಯನ್ನು ರಕ್ಷಿಸಿದ ಭಾರತೀಯ ಕರಾವಳಿ ಕಾವಲು ಪಡೆ
ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ...
ಕೋಳಿಕ್ಕೊಡ್(ಕೇರಳ): ಮುಳುಗುತ್ತಿದ್ದ ಸೆಲ್ವಮಾತಾ ಹಡಗಿನಿಂದ 8 ಮಂದಿಯನ್ನು ರಕ್ಷಿಸುವಲ್ಲಿ ಭಾರತೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಸೆಲ್ವಮಾತಾ ಹಡಗು ಕೇರಳದ ಬೀಪೋರ್ನಿಂದ ಲಕ್ಷ ದ್ವೀಪಕ್ಕೆ ಹೊರಟಿತ್ತು. ಆದರೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಹಡಗು ಮುಳುಗುತ್ತಿರುವುದನ್ನು ಗಮನಿಸಿದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಡಗಿನಲ್ಲಿದ್ದ 8 ಮಂದಿಯನ್ನು ರಕ್ಷಿಸಿದ್ದಾರೆ.
ಸದ್ಯ 8 ಮಂದಿಯು ಆರೋಗ್ಯದಿಂದ ಇದ್ದಾರೆ. ಯಾವುದೇ ಸಮಸ್ಯೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.