ದೇಶ

ಒವೈಸಿ ಕಾರಿನ ಮೇಲೆ ಕಲ್ಲು ತೂರಾಟ: ಅದಿಲಾಬಾದ್ ನಲ್ಲಿ ಉದ್ವಿಗ್ನ ವಾತಾವರಣ

ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಅವರ ವಾಹನದ ಮೇಲೆ ವಿಎಚ್ ಪಿ ಕಾರ್ಯಕರ್ತರು ಕಲ್ಲು...

ಅದಿಲಾಬಾದ್: ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ ಅವರ ವಾಹನದ ಮೇಲೆ ವಿಎಚ್ ಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರಿಂದ ತೆಲಂಗಾಣ ರಾಜ್ಯದ ಅದಿಲಾಬಾದ್ ಜಿಲ್ಲೆಯ ಬೈನ್ಸಾ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯವಾದ ವರದಿಯಾಗಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ಸದ್ಯ ವಿವಾದದಲ್ಲಿರುವ ಸಂಸದ ಅಸದುದ್ದೀನ್ ಒವೈಸಿ ತಮ್ಮ ಬೆಂಬಲಿಗರೊಬ್ಬರ ಚಿನ್ನದ ಮಳಿಗೆಯನ್ನು ಉದ್ಘಾಟಿಸಲು ಬೈನ್ಸಾ ಪಟ್ಟಣಕ್ಕೆ ಆಗಮಿಸುತ್ತಿದ್ದರು. ಅವರು ಭಾರತ್ ಮಾತಾ ಕಿ ಜೈ ಎಂದು ಹೇಳಲು ನಿರಾಕರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ವಿಎಚ್ ಪಿ ಕಾರ್ಯಕರ್ತರು ಅದೇ ಸಂದರ್ಭದಲ್ಲಿ ರ್ಯಾಲಿ ನಡೆಸುತ್ತಿದ್ದರು.

100ಕ್ಕೂ ಹೆಚ್ಚು ವಿಎಚ್ ಪಿ ಕಾರ್ಯಕರ್ತರು ಪಟ್ಟಣದ ತಹಸೀಲ್ದಾರ್ ಕಚೇರಿಯೆದುರು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ಸೇರಿದ್ದರು. ಅವರಿಗೆ ಅಸದುದ್ದೀನ್ ಬರುವ ಮಾಹಿತಿ ಸಿಕ್ಕಿತ್ತು. ಹಾಗಾಗಿ ಅವರ ವಾಹನವನ್ನು ತಡೆಯಲು ಯತ್ನಿಸಿದ್ದರು.

ಆದರೆ ಪೊಲೀಸರು ಅವರ ಪ್ರಯತ್ನವನ್ನು ವಿಫಲಗೊಳಿಸಿ ತಹಸೀಲ್ದಾರರ ಕಚೇರಿ ಆವರಣದಲ್ಲಿ ಕೂಡಿಹಾಕಿದ್ದರು. ಆದರೂ ಕೆಲ ಪ್ರತಿಭಟನಾಕಾರರು ಹೊರಬಂದು ಅಸದುದ್ದೀನ್ ಒವೈಸಿ ವಾಹನಕ್ಕೆ ಕಲ್ಲು ತೂರಾಟ ನಡೆಸಿದರು.

ಆಗ ಒವೈಸಿ ಬೆಂಬಲಿಗರು ಪ್ರತೀಕಾರ ತೀರಿಸಲು ಮುಂದಾದರು. ಘಟನೆಯಲ್ಲಿ ಕೆಲ ಪೊಲೀಸರಿಗೆ ಗಾಯಗಳಾಗಿವೆ. ಸ್ಥಳೀಯ ಡಿಎಸ್ಪಿ ಈಗ ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ಮಹಾ ನಿರ್ದೇಶಕ ತರುಣ್ ಜೋಶಿ ಸಹ ಸ್ಥಳಕ್ಕೆ ತೆರಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT