ಪ್ರೊಬಿರ್ ಮೈತಿ 
ದೇಶ

ಅಪಘಾತದಲ್ಲಿ ಕೊರಿಯಾ ಎಂಎನ್‌ಸಿ ಕಂಪನಿಯ ಹಿರಿಯ ಅಧಿಕಾರಿ ಸಾವು

ಚೆನ್ನೈನ ಚೆಂಗಲ್ ಪಟ್ಟು ಬೈಪಾಸ್ ಬಳಿಯ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊರಿಯಾ ಮೂಲದ ಎಂಎನ್‌ಸಿಯ ಹಿರಿಯ ಅಧಿಕಾರಿಯೊಬ್ಬರು...

ಚೆನ್ನೈ: ಚೆನ್ನೈನ ಚೆಂಗಲ್ ಪಟ್ಟು ಬೈಪಾಸ್ ಬಳಿಯ ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊರಿಯಾ ಮೂಲದ ಎಂಎನ್‌ಸಿಯ ಹಿರಿಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಕೊಲ್ಕತ್ತಾ ಮೂಲದ 52 ವರ್ಷದ ಪ್ರೊಬಿರ್ ಮೈತಿ ಎಂದು ಗುರುತಿಸಲಾಗಿದೆ. ಕಂಪನಿ ಕೆಲಸ ನಿಮಿತ್ತ ಮೈತಿ ಅವರು ಚೆನ್ನೈಗೆ ಆಗಮಿಸಿದ್ದರು. ಚೆನ್ನೈ ಸಿಟಿ ವಿಮಾನ ನಿಲ್ದಾಣಕ್ಕೆ ಬಂದ ಅವರು ಖಾಸಗಿ ಕ್ಯಾಬ್ ಇನೋವಾ ವಾಹನದಲ್ಲಿ ತೆರಳಿದ್ದಾರೆ. ಈ ವೇಳೆ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ.

ಬೈಸ್ ಪಾಸ್ ರಸ್ತೆಯಲ್ಲಿ ಸರ್ಕಾರಿ ಬಸ್ ನ ಚಾಲಕ ಅತೀ ವೇಗವಾಗಿ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಮೈತಿ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಮೈತಿ ಹಾಗೂ ಕಾರು ಚಾಲಕ ಎಲ್. ಜನಾರ್ಧನ್ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!