ಅಸಾರಾಮ್ ಪ್ರಕರಣ: ಅತ್ಯಾಚಾರ ಸಂತ್ರಸ್ತೆ ತಂದೆಗೆ ಜೀವ ಬೆದರಿಕೆ ಕರೆ
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅತ್ಯಾಚಾರ ಸಂತ್ರಸ್ತೆ ತಂದೆಗೆ ಬೆದರಿಕೆ ಕರೆ ಬಂದಿರುವುದಾಗಿ ಭಾನುವಾರ...
ಷಹಜಹಾನ್ಪುರ: ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಅತ್ಯಾಚಾರ ಸಂತ್ರಸ್ತೆ ತಂದೆಗೆ ಬೆದರಿಕೆ ಕರೆ ಬಂದಿರುವುದಾಗಿ ಭಾನುವಾರ ತಿಳಿದುಬಂದಿದೆ.
ಈ ಕುರಿತಂತೆ ಮಾತನಾಡಿರುವ ಅತ್ಯಾಚಾರ ಸಂತ್ರಸ್ತೆ ತಂದೆ, ನಿನ್ನೆ ನನ್ನ ಮೊಬೈಲ್ ಫೋನ್ ಗೆ ಕರೆಯೊಂದು ಬಂದಿತ್ತು. ಕರೆ ಮಾಡಿದ ವ್ಯಕ್ತಿ ಬಾಪೂ ವಿರುದ್ಧ ದಾಖಲು ಮಾಡಿರುವ ಪ್ರಕರಣವನ್ನು ಹಿಂಪಡೆಯದಿದ್ದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರ ಬಳಿ ಹೇಳಿಕೊಂಡಿದ್ದಾರೆ.
ಇದೀಗ ಈ ಬೆದರಿಕೆ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಅವರು, ಸಂತ್ರಸ್ತೆ ಕುಟುಂಬಕ್ಕೆ ಮತ್ತಷ್ಟು ಭದ್ರತೆಯನ್ನು ಒದಗಿಸಲಾಗಿದ್ದು, ಬೆದರಿಕೆ ಕರೆ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.