ಲಷ್ಕರ್ ಎ ತೊಯ್ಬಾ 
ದೇಶ

ಭಾರತೀಯ ಸೇನೆ ಮೇಲೆ ದಾಳಿಗೆ ಲಷ್ಕರ್-ಎ-ತೊಯ್ಬಾ ಉಗ್ರರ ಸಂಚು

ಭಾರತೀಯ ಸೇನೆ ಮೇಲೆ ದಾಳಿಗೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ...

ನವದೆಹಲಿ: ಭಾರತೀಯ ಸೇನೆ ಮೇಲೆ ದಾಳಿಗೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂಬ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ.

ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಾಶ್ಮೀರ ಮುಖ್ಯಸ್ಥ ಅಬು ದುಜಾನ ನೇತೃತ್ವದಲ್ಲಿ 10 ಮಂದಿ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಲು ತಯಾರಿ ನಡೆಸಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಎಲ್​ಇಟಿ ಉನ್ನತ ನಾಯಕರ ಜತೆ ದುಜಾನ ನಡೆಸಿದ ಟೆಲಿಫೋನ್ ಕರೆ ಸಂಭಾಷಣೆಯಲ್ಲಿ ದಾಳಿ ನಡೆಸುವಂತೆ ಲಷ್ಕರ್​ಗೆ ಸೂಚನೆ ನೀಡಲಾಗಿದೆ.

ಇನ್ನು ಬಿಎಸ್​ಎಫ್ ಯೋಧರ ಮೇಲೆ ದಾಳಿ ಮಾಡಿ ಅವರ ಬಳಿ ಇರುವ ಶಸ್ತ್ರಾಸ್ತ್ರಗಳ ಲೂಟಿ ಮಾಡಿದವರಿಗೆ ಅವರಿಗೆ 1 ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ಉಗ್ರ ಸಂಘಟನೆ ಘೋಷಣೆ ಮಾಡಿದೆ. ಇತ್ತೀಚೆಗೆ ಭದ್ರತಾ ಪಡೆ ಯೋಧರು ನಡೆಸಿದ ಕಾರ್ಯಚರಣೆ ವೇಳೆ ಕೂದಲೆಳೆಯ ಅಂತರದಲ್ಲಿ ದುಜಾನ ಮತ್ತು ಇನ್ನಿತರ 4 ಉಗ್ರರು ತಪ್ಪಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್