ಗುಜರಾತ್ ನ ಪ್ರಾಥಮಿಕ ಶಾಲೆಗಳಲ್ಲಿ 13 ಸಾವಿರ ಶಿಕ್ಷಕರ ಕೊರತೆ! 
ದೇಶ

ಗುಜರಾತ್ ನ ಪ್ರಾಥಮಿಕ ಶಾಲೆಗಳಲ್ಲಿ 13 ಸಾವಿರ ಶಿಕ್ಷಕರ ಕೊರತೆ!

ಗುಜರಾತ್ ನಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಕಾಂಗ್ರೆಸ್ ನ ನಿರಂತರ ಆರೋಪದ ಬೆನ್ನಲ್ಲೇ ಗುಜರಾತ್ ನಲ್ಲಿ ಶಿಕ್ಷಕರ ಕೊರತೆ ಇದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ.

ಅಹಮದಾಬಾದ್: ಗುಜರಾತ್ ನಲ್ಲಿ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಕಾಂಗ್ರೆಸ್ ನ ನಿರಂತರ ಆರೋಪದ ಬೆನ್ನಲ್ಲೇ ಗುಜರಾತ್ ನಲ್ಲಿ ಶಿಕ್ಷಕರ ಕೊರತೆ ಇದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ.

ರಾಜ್ಯ ಸರ್ಕಾರದಿಂದ ನಿರ್ವಹಣೆಯಾಗುತ್ತಿರುವ ಪ್ರಾಥಮಿಕ ಶಾಲೆಗಳಲ್ಲಿ 13 ,000 ಶಿಕ್ಷಕರ ಕೊರತೆ ಎದುರಾಗಿದೆ ಎಂದು ಸರ್ಕಾರ ಇತ್ತೀಚೆಗೆ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದೆ. ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಇರಬೇಕಾದ ಶಿಕ್ಷಕರ ಸಂಖ್ಯೆ 1,80,601 , ಆದರೆ ಕಾರ್ಯನಿರ್ವಹಿಸುತ್ತಿರುವವರು ಮಾತ್ರ 1,67,461 ಶಿಕ್ಷಕರು ಎಂದು ಸರ್ಕಾರ ಮಾಹಿತಿ ನೀಡಿದೆ. ರಾಜ್ಯಾದ್ಯಂತ ಒಟ್ಟು 13 ,140 ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಕಛ್ ಜಿಲ್ಲೆ ಹಾಗೂ ಬನಸ್ಕಾಂತ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಕರ ಕೊರತೆ ಇದೆ.  ಕಛ್ ನಲ್ಲಿ 2 ,724 ಹುದ್ದೆಗಳು ಖಾಲಿ ಇದ್ದರೆ, ಬನಸ್ಕಾಂತದಲ್ಲಿ ,1 ,741 ಹುದ್ದೆಗಳು ಖಾಲಿ ಇವೆ. ಮತ್ತೊಂದು ಅಂಕಿ-ಅಂಶಿಗಳ ಪ್ರಕಾರ 6 -8 ನೇ ತರಗತಿಗೆ ಗಣಿತ- ವಿಜ್ಞಾನ ವಿಷಯ ಬೋಧಿಸುವ 2 ,400 ಶಿಕ್ಷಕರ ಕೊರತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ

ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!

ಸ್ಟೈಲಿಶ್ ಕಪ್ಪು ಉಡುಪಿನಲ್ಲಿ ಮಿಂಚಿದ ಪಾರ್ವತಿ ತಿರುವೋತ್; ದಂಗಾದ ಅಭಿಮಾನಿಗಳು, Video!

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪ