ದೇಶ

ಕೃಷಿ ಕ್ಷೇತ್ರದ ಕ್ಷಿಪ್ರ ಬೆಳವಣಿಗೆಯಿಂದ ಬಡತನ ನಿರ್ಮೂಲನೆ ಸಾಧ್ಯ: ಅರುಣ್ ಜೇಟ್ಲಿ

Srinivas Rao BV
ಮುಂಬೈ: ಬಡತನ ನಿರ್ಮೂಲನೆಯಾಗಬೇಕಾದರೆ ದೇಶದ ಕೃಷಿ ಕ್ಷೇತ್ರ ಕ್ಷಿಪ್ರಗತಿಯಲ್ಲಿ ಬೆಳವಣಿಗೆಯಾಗಬೇಕಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿರುವ ಅರುಣ್ ಜೇಟ್ಲಿ,  ಬಡತನ ನಿರ್ಮೂಲನೆ ಮಾಡುವುದರೊಂದಿಗೆ ದೇಶದ ಜಿಡಿಪಿ ಹೆಚ್ಚಿಸುವುದಕ್ಕೆ ಹಾಗೂ ಅರ್ಥ ವ್ಯವಸ್ಥೆಗೆ ಕೃಷಿ ಕ್ಷೇತದ ಕ್ಷಿಪ್ರ ಬೆಳವಣಿಗೆ ಸಹಕಾರಿ ಎಂದಿದ್ದು ಪ್ರಸಕ್ತ ವರ್ಷದಲ್ಲಿ ಕ್ಷೀಣಿಸಿರುವ ಮುಂಗಾರು ಕೃಷಿ ಕ್ಷೇತ್ರವನ್ನು ಪರೀಕ್ಷೆಗೆ ಒಡ್ಡಲಿರುವ ಸಾಧ್ಯತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 
ಇತ್ತೀಚಿಗೆ ಪ್ರಾರಂಭವಾದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಮಾತನಾಡಿರುವ ಜೇಟ್ಲಿ, ಫಸಲ್ ಭೀಮಾ ಯೋಜನೆ ಕೃಷಿ ವಲಯದಲ್ಲಿನ ಸಮಸ್ಯೆಗಳನ್ನು, ರೈತರ ಆತ್ಮಹತ್ಯೆಗಳನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
SCROLL FOR NEXT