ಬಿಜೆಪಿ ನಾಯಕಿ ಕುಂದನಿಕ ಶರ್ಮಾ 
ದೇಶ

ಪ್ರಚೋದನಕಾರಿ ಹೇಳಿಕೆ: ಬಿಜೆಪಿ ನಾಯಕಿ ಕುಂದನಿಕ ಶರ್ಮಾ ಬಂಧನ

ವಿಹೆಚ್ ಪಿ ನಾಯಕ ಅರುಣಿ ಮಹೌರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ...

ಆಗ್ರಾ: ವಿಹೆಚ್ ಪಿ ನಾಯಕ ಅರುಣಿ ಮಹೌರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕಿ ಕುಂದನಿಕ ಶರ್ಮಾ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ವೈದ್ಯಕೀಯ ತಪಾಸಣೆಯ ನಂತರ ಕುಂದನಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಲಾಯವು ಕುಂದನಿಕ ಅವರಿಗೆ ಏ.2 ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ಕುಂದನಿಕ ಅವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ ನೂನೂರು ಬಿಜೆಪಿ ಬೆಂಬಲಿಗರು ನ್ಯಾಯಾಲಯದ ಅವರಣದಲ್ಲಿ ಘೋಷಣೆಗಳನ್ನು ಕೂಗುತ್ತಿದ್ದು. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಿರಲೆಂದು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಇದೀಗ ಕುಂದನಿಕ ಅವರಿಗೆ ಜಾಮೀನು ದೊರೆತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

40 ವರ್ಷದ ವಿಹೆಚ್ ಪಿ ನಾಯಕ ಅರುಣ್ ಕುಮಾರ್ ಅವರು ಕಳೆದ ತಿಂಗಳು ದೇವಸ್ಥಾನವೊಂದಕ್ಕೆ ಹೋಗಿ ಮನೆಗೆ ಬರುತ್ತಿದ್ದರು. ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಅವರನ್ನು ಹತ್ಯೆ ಮಾಡಿತ್ತು. ಅರುಣ್ ಅವನರ ಹಿನ್ನೆಲೆಯಲ್ಲಿ  ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT