ನವದೆಹಲಿ: ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ ಪ್ರಕರಣ ಸಂಬಂಧ ಬಂಧಿತನಾಗಿ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಜೆಎನ್ ಯು ಪ್ರಕರಣ ಬೆಳಕಿಗೆ ಬಂದಾಗಿನಿಂದ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಕನ್ಹಯ್ಯ ಕುಮಾರ್ ನನ್ನು ಭೇಟಿಯಾಗಿದ್ದು, ರಾಜಧಾನಿ ದೆಹಲಿಯಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಜೆಎನ್ ಯು ಪ್ರಕರಣ ಸಂಬಂಧ ಕನ್ಹಯ್ಯ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದರೂ ರಾಹುಲ್ ಗಾಂಧಿ ಮಾತ್ರ ಕನ್ಹಯ್ಯ ಪರವಾಗಿ ನಿಂತು ಬೆಂಬಲವನ್ನು ಸೂಚಿಸಿದ್ದರು. ಅಲ್ಲದೆ, ಕನ್ಹಯ್ಯನಿಗೆ ನ್ಯಾಯ ಸಿಗಬೇಕೆಂದು ಪ್ರತಿಭಟನೆಯನ್ನು ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದ ಅವರು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.