ದೇಶ

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಸಮನ್ಸ್

Lingaraj Badiger

ನವದೆಹಲಿ: 2013ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ದೆಹಲಿ ಸಿಎಂಗೆ ಸಮನ್ಸ್ ಜಾರಿ ಮಾಡಿರುವ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಅವರು, ಜುಲೈ 30ರೊಳಗೆ ಸರಿಯಾದ ವಿಳಾಸ ಮತ್ತು ಅಫಿಡವಿಟ್ ನಲ್ಲಿ ಘೋಷಿಸಿರುವ ಆಸ್ತಿಯ ಮೌಲ್ಯವನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡುವುದು ಜನಪ್ರತಿನಿಧಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಅದು ಸಾಬೀತಾಗಿದೆ ಎಂದು ಕೋರ್ಟ್ ಹೇಳಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಅವರು ತಾವು ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ವಾಸಿಸುತ್ತಿದ್ದರೂ, ದೆಹಲಿಯ ನಿವಾಸಿ ಎಂದು ತಪ್ಪು ಮಾಹಿತಿ ನೀಡಿದ ಆರೋಪ ಎದುರಿಸುತ್ತಿದ್ದಾರೆ.

SCROLL FOR NEXT