ಆಜಂಗಢ: ಕ್ರಿಕೆಟ್ ನ್ನು ಗುಲಾಮಗಿರಿಯ ಸಂಕೇತದ ಕ್ರೀಡೆಯೆಂದು ಹೇಳಿರುವ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್, ದೇಶದ ಅಭಿವೃದ್ಧಿಗೆ ಖೋಖೋ, ಕುಸ್ತಿಯಂತಹ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.
ಬ್ರಿಟೀಷ್ ಆಡಳಿತದ ಅಡಿಯಲ್ಲಿದ್ದ ರಾಷ್ಟ್ರಗಳು ಮಾತ್ರ ಕ್ರಿಕೆಟ್ ಪಂದ್ಯಗಳನ್ನಾಡುತ್ತವೆ ಎಂದು ಮುಲಾಯಂ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಆಜಂಗಢದಲ್ಲಿ ಮಾತನಾಡಿರುವ ಮುಲಾಯಂ ಸಿಂಗ್ ಯಾದವ್, ಪ್ರಧಾನಿ ಮೋದಿ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ, ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದು, ಹಣದುಬ್ಬರ ಕಡಿಮೆ ಮಾಡುವುದು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆ ಎಂದಿದ್ದಾರೆ. ಎಸ್ ಪಿ ನಾಯಕರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಮುಲಾಯಂ ಸಿಂಗ್ ಯಾದವ್, ಎಸ್ ಪಿ ನಾಯಕರು ಸರ್ಕಾರದ ಸಾಧನೆಗಳನ್ನು ಜನರಿಗೆ ಸರಿಯಾಗಿ ತಲುಪಿಸುತ್ತಿಲ್ಲ ಎಂದಿದ್ದು 2017 ರಲ್ಲಿ ಎಸ್ ಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದು ಕರೆ ನೀಡಿದ್ದಾರೆ.