ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಅರುಣ್ ಜೇಟ್ಲಿ 
ದೇಶ

ಅಸ್ಸಾಂ ಚುನಾವಣೆ: ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಅಸ್ಸಾಂ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಶುಕ್ರವಾರ ಕೇಂದ್ರ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ...

ಗುವಾಹತಿ: ಅಸ್ಸಾಂ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಶುಕ್ರವಾರ ಕೇಂದ್ರ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರು ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೇಟ್ಲಿ, ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸೋಲಿಸಲು ಅಸ್ಸಾಂ ವಿಧಾನಸಭೆ ಚುನಾವಣೆ ಒಂದು ಐತಿಹಾಸಿಕ ಅವಕಾಶ ಎಂದರು,
ಇನ್ನು ಪಕ್ಷದ ಚುನಾವಣೆ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಜೇಟ್ಲಿ, 2016ರಿಂದ 2025ರವರೆಗೆ ಏನೇನು ಮಾಡಬೇಕು ಎಂಬುದರ ಮುನ್ನೋಟ ಇದು ಎಂದರು,
ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ, ಕಾಂಗ್ರೆಸ್ ಅಕ್ರಮ ನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದೆ. ಹಲವು ದಶಕಗಳಿಂದ ಕಾಂಗ್ರೆಸ್ ಇದನ್ನೆ ಮಾಡುತ್ತಿದ್ದು, ಅಕ್ರಮ ನುಸುಳುವಿಕೆ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಬಿಜೆಪಿ ತನ್ನ ಚುನಾವಣೆ ಪ್ರಣಾಳಿಯಲ್ಲಿ, ಒಂದು ವೇಳೆ ಪಕ್ಷ ಅಧಿಕಾರಕ್ಕೆ ಬಂದರೆ, ಕೇಂದ್ರದ ಸಹಕಾರದೊಂದಿಗೆ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ನುಸುಳುವಿಕೆಯನ್ನು ಸಂಪೂರ್ಣ ತಡೆಯುವುದು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT