ಬಾಬಾ ರಾಮ್ ದೇವ್ 
ದೇಶ

ಉತ್ತರಾಖಂಡ ರಾಜಕೀಯ ಅಸ್ಥಿರತೆಗೆ ರಾಮ್‌ದೇವ್‌ ಹೊಣೆ: ಕಾಂಗ್ರೆಸ್ ಆರೋಪ

ಉತ್ತರಾಖಂಡದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಯೋಗಗುರು ಬಾಬಾ ರಾಮ್‌ದೇವ್‌ ಅವರು ಕಾರಣ ಎಂದು ಕಾಂಗ್ರೆಸ್‌ ಆರೋಪಿಸಿದೆ....

ಡೆಹ್ರಾಡೂನ್‌ : ಉತ್ತರಾಖಂಡದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ಯೋಗಗುರು ಬಾಬಾ ರಾಮ್‌ದೇವ್‌ ಅವರು ಕಾರಣ ಎಂದು ಕಾಂಗ್ರೆಸ್‌ ಆರೋಪಿಸಿದೆ.

ತಮ್ಮ ಪಕ್ಷದ ಸರ್ಕಾರವನ್ನು ಉರುಳಿಸಲು  ಬಿಜೆಪಿಯೊಂದಿಗೆ ರಾಮ್ ದೇವ್ ಕೈಜೋಡಿಸಿದ್ದಾರೆ. ರಾಮ್‌ದೇವ್‌ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಕುತಂತ್ರ ನಡೆಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಹೀಗಾಗಿಯೇ ಕೆಲವು ಶಾಸಕರು ಮುಖ್ಯಮಂತ್ರಿ ಹರೀಶ್‌ ರಾವತ್‌ ವಿರುದ್ಧ ಬಂಡಾಯವೆದ್ದಿದ್ದಾರೆ’ ಎಂದು ಉತ್ತರಾಖಂಡ  ಕಾಂಗ್ರೆಸ್‌ ಅಧ್ಯಕ್ಷ ಕಿಶೋರ್‌ ಉಪಾಧ್ಯಾಯ ಆಪಾದಿಸಿದ್ದಾರೆ.

ಮಾರ್ಚ್‌ 18ರಂದು ವಿಧಾನಸಭೆಯಲ್ಲಿ ಬಿಕ್ಕಟ್ಟು  ಸೃಷ್ಟಿಯಾಯಿತು.  ಅದಕ್ಕೂ ಮುನ್ನವೇ ಒಂಬತ್ತು  ಮಂದಿ ಬಂಡಾಯ ಕಾಂಗ್ರೆಸ್‌ ಶಾಸಕರ ಜತೆ ರಾಮ್‌ದೇವ್‌ ಸಂಪರ್ಕದಲ್ಲಿದ್ದರು ಎಂದು ದೂರಿದ್ದಾರೆ.

ಕಾಂಗ್ರೆಸ್‌ ಆರೋಪಗಳನ್ನು ತಳ್ಳಿ ಹಾಕಿರುವ ರಾಮ್‌ದೇವ್‌, ‘ನಾನು ಕಾಂಗ್ರೆಸ್ ಶಾಸಕರು ಅಥವಾ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿಲ್ಲ. ಈ ವಿಷಯದಲ್ಲಿ ಅನಗತ್ಯವಾಗಿ ನನ್ನ ಹೆಸರು ತರಲಾಗುತ್ತಿದೆ. ನಾವು ಏನೇ ಮಾಡಿದರೂ ಬಹಿರಂಗವಾಗಿ ಮಾಡುತ್ತೇವೆ. ನಮಗೆ ರಹಸ್ಯ ಕಾರ್ಯಸೂಚಿ ಇಲ್ಲ’ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ