ಸರ್ಕಾರ ರಚನೆ ಹಿನ್ನೆಲೆ: ಜಮ್ಮು-ಕಾಶ್ಮೀರ ಬಿಜೆಪಿ ಶಾಸಕರ ಸಭೆ 
ದೇಶ

ಸರ್ಕಾರ ರಚನೆ ಹಿನ್ನೆಲೆ: ಜಮ್ಮು-ಕಾಶ್ಮೀರ ಬಿಜೆಪಿ ಶಾಸಕರ ಸಭೆ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಸಭೆ  ನಡೆಸಿದ್ದಾರೆ.

ಪ್ರಧಾನಿ ಕಚೇರಿಯ ರಾಜ್ಯ ಸಚಿವರಾಗಿರುವ  ಜಿತೇಂದ್ರ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ, ಜಮ್ಮು-ಕಾಶ್ಮೀರ ಉಸ್ತುವಾರಿ ರಾಮ್ ಮಾಧವ್ ಸಹ ಸಭೆಯಲ್ಲಿ ಭಾಗವಹಿಸಿದ್ದರು. ಸರ್ಕಾರ ರಚನೆ ಸಂಬಂಧ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಶಾಸಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮೊದಲ ಬಾರಿ ಸರ್ಕಾರ ರಚನೆ ಮಾಡಿದ ಸಂದರ್ಭದಲ್ಲಿ ಉಭಯ ಪಕ್ಷಗಳಿಗೂ ಒಪ್ಪಿಗೆಯಾಗಿದ್ದ ಷರತ್ತುಗಳನ್ನು ಹೊರತುಪಡಿಸಿ ಹೊಸ ಷರತ್ತುಗಳಿಗೆ ಒಪ್ಪಿಗೆ ನೀಡಲಾಗಿಲ್ಲ ಎಂದು ಬಿಜೆಪಿ ಪುನರುಚ್ಚರಿಸಿದೆ. ಮೆಹಬೂಬಾ ಮುಫ್ತಿ ನೇತೃತ್ವದ ಸರ್ಕಾರ ರಚನೆ ಕುರಿತು ಶೀಘ್ರವೇ ಬಿಜೆಪಿಯ ಜಂಟಿ ಸಮನ್ವಯ ಸಮಿತಿಸಭೆ ನಡೆಯಲಿದೆ ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!