ಹೋಳಿ ವೇಳೆ ಘರ್ಷಣೆ: 5 ಜನರಿಗೆ ಗಾಯ 
ದೇಶ

ಹೋಳಿ ವೇಳೆ ಘರ್ಷಣೆ: 5 ಜನರಿಗೆ ಗಾಯ

ಹೋಳಿ ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆ ವೇಳೆ ಕನಿಷ್ಠ 5 ಜನ ಗಾಯಗೊಂಡಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ಹೋಳಿ ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆ ವೇಳೆ ಕನಿಷ್ಠ 5 ಜನ ಗಾಯಗೊಂಡಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.
ಮುಜಾಫರ್ ನಗರದ ಗ್ರಾಮವೊಂದರಲ್ಲಿ ಹೋಳಿ ಆಚರಣೆ ನಡೆಯುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.   
ಜಾಟ್ ಸಮುದಾಯ ಹಾಗೂ ದಲಿತರ ನಡುವೆ  ಘರ್ಷಣೆ ನಡೆದಿದ್ದು ಕುಡಿದ ಮತ್ತಿನಲ್ಲಿ ಎರಡೂ ಕಡೆಯವರು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಶಂಕಿಸಲಾಗಿದೆ. ಘರ್ಷಣೆ ವೇಳೆ ಗುಂಡಿನ ದಾಳಿ ಸಹ ನಡೆದಿದ್ದು ಗುಂಡೇಟಿಗೆ ಗುರಿಯಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT