ನವದೆಹಲಿ: ಜವಹರ್ ಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಪಕ್ಷ ಸೇರಲು ನಿರ್ಧರಿಸಿದರೇ ಕಾಂಗ್ರೆಸ್ ಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.
ಖಾಸಗಿ ಚಾನೆಲ್ ವೊಂದರ ಸಂದರ್ಶನದಲ್ಲಿ ಶಶಿ ತರೂರ್, ಒಂದು ವೇಳೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ ಸೇರಲು ಬಯಸಿದರೇ, ಅವರನ್ನು ಪಕ್ಷಕ್ಕೆ ಸ್ವಾಗತಿಸಿದೇ ಇರಲು ಕಾರಣ ಇಲ್ಲ. ಅವರಿಗೆ ರಾಜಕೀಯ ಪಕ್ಷದ ಸದಸ್ಯತ್ವ ಸಿಗುತ್ತದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯತೆ ವಾದವನ್ನು ರಾಜಕೀಯ ಗೊಳಿಸಿದವರು ಯಾರು ಎಂದು ಪ್ರಶ್ನಿಸಿದ ತರೂರ್, ಬಿಜೆಪಿ ನಾಯಕರೇ ರಾಷ್ಟ್ರೀಯತೆ ವಿಷಯವನ್ನು ರಾಜಕೀಯಗೊಳಿಸಿದರು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.