ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಟ್ವಿಟ್ಟರ್ ಹಿಂಬಾಲಕರಾಗಿರುವುದಕ್ಕೆ ಕೇಜ್ರಿವಾಲ್ ಮೋದಿಗೆ ಧನ್ಯವಾದ ಹೇಳಿದ್ದಾರೆ.
ಹೋಳಿ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮೋದಿಗೆ ಶುಭಾಶಯ ಹೇಳಿರುವ ಕೇಜ್ರಿವಾಲ್ ಮುಂದಿನ ದಿನಗಳಲ್ಲಿ ಪ್ರಧಾನಿ ತಮ್ಮ ಸರ್ಕಾರಕ್ಕೆ ಉತ್ತಮ ಬೆಂಬಲ ನೀಡುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವೆ ತಿಕ್ಕಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮೋದಿ ಸರ್ಕಾರ ಆಪ್ ಸರ್ಕಾರಕ್ಕೆ ಉತ್ತಮ ಸಹಕಾರ ನೀಡಲಿದೆಯೆಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.