ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು 
ದೇಶ

ಹೊಸ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿ ಸಾಧ್ಯತೆ: ಅಶೋಕ್ ಗಜಪತಿ ರಾಜು

ಹೊಸ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ...

ನವದೆಹಲಿ: ಹೊಸ ರಾಷ್ಟ್ರೀಯ ನಾಗರಿಕ ವಿಮಾನಯಾನ ನೀತಿ ಏಪ್ರಿಲ್ ನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ತಿಳಿಸಿದ್ದಾರೆ.

ಮುಂದಿನ ತಿಂಗಳು ಬಿಡುಗಡೆಯಾಗಲಿರುವ ನೂತನ ವಿಮಾನಯಾನ ನೀತಿಯ ಕೆಲಸವನ್ನು ನಾವು ಈಗ ಮಾಡುತ್ತಿದ್ದೇವೆ. ಕರಡು ನೀತಿಯ ಬಗ್ಗೆ ಅನೇಕ ಸಲಹೆಗಳನ್ನು ನಾವು ಪಡೆದಿದ್ದೇವೆ. ಮುಂದಿನ ತಿಂಗಳು ಜಾರಿಗೆ ಬರುವ ನಿರೀಕ್ಷೆಯಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ದೇಶಕ್ಕೆ 4 ಅತ್ಯಾಧುನಿಕ ವಿಮಾನ ನಿಲ್ದಾಣಗಳ ಅವಶ್ಯಕತೆಯಿದೆ. ಎರಡು ಪಶ್ಚಿಮ ಕರಾವಳಿಯಲ್ಲಿ ಮತ್ತು ಇನ್ನೆರಡು ಪೂರ್ವ ಕರಾವಳಿಯಲ್ಲಿ. ಪ್ರಸ್ತುತ ದೆಹಲಿ, ಬೆಂಗಳೂರು ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಸಮಾನಾಂತರವಾಗಿ ಮೂರು ಅತ್ಯಾಧುನಿಕ ವಿಮಾನ ನಿಲ್ದಾಣಗಳಿವೆ. ನಾಲ್ಕನೆಯದ್ದು ವಿಶಾಖಪಟ್ಟಣಂನಲ್ಲಿ ಬರಲಿದೆ. ಭಾರತದಂತಹ ದೇಶಗಳಿಗೆ ಹೋಲಿಸಿದರೆ ನಾಲ್ಕು ಅತ್ಯಾಧುನಿಕ ವಿಮಾನ ನಿಲ್ದಾಣಗಳ ಅಗತ್ಯವಿದೆ ಎಂದು ಸಚಿವರು ಹೇಳಿದರು.

ಭೂಮಿಗಳು ಆಯಾ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಒಳಪಡುವುದರಿಂದ ಹೊಸ ವಿಮಾನ ನಿಲ್ದಾಣಗಳನ್ನು ಆರಂಭಿಸಲು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಮುಂದೆ ಬಂದು ಜಾಗ ಒದಗಿಸಿದರೆ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಕುರಿತು ಪರಿಗಣಿಸಲಾಗುವುದು ಎಂದರು.
ರಾಜಮುಂದ್ರಿ ವಿಮಾನ ನಿಲ್ದಾಣವನ್ನು ವಿಸ್ತರಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಆ ಕೆಲಸ ಮುಕ್ತಾಯವಾಗಲಿದೆ. ವಿಜಯವಾಡ ಸಮೀಪವಿರುವ ಗನ್ನವರಂ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು. ರಾಜ್ಯ ಸರ್ಕಾರ ಅದಕ್ಕಾಗಿ 700 ಎಕರೆ ಭೂಮಿಯನ್ನು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT