ಉತ್ತರ ಪ್ರದೇಶದಲ್ಲಿ ಹೋಳಿ ಸಂಭ್ರಮ (ಸಂಗ್ರಹ ಚಿತ್ರ) 
ದೇಶ

ಹೋಳಿ ಆಚರಣೆ ವೇಳೆ ಉತ್ತರ ಪ್ರದೇಶದಲ್ಲಿ 24ಕ್ಕೂ ಅಧಿಕ ಮಂದಿ ಬಲಿ

ಹೋಳಿ ಆಚರಣೆ ಸಂದರ್ಭ ತೀವ್ರ ಭದ್ರತೆಯ ನಡುವೆಯೂ ಉತ್ತರ ಪ್ರದೇಶದಾದ್ಯಂತ ಸುಮಾರು 24 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ...

ಲಖನೌ: ಹೋಳಿ ಆಚರಣೆ ಸಂದರ್ಭ ತೀವ್ರ ಭದ್ರತೆಯ ನಡುವೆಯೂ ಉತ್ತರ ಪ್ರದೇಶದಾದ್ಯಂತ ಸುಮಾರು 24 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಮಾಹಿತಿ ನೀಡಿರುವ ಉತ್ತರ ಪ್ರದೇಶ ಪೊಲೀಸರು, ಹೋಳಿ ಹಬ್ಬದ ದಿನ ರಾಜ್ಯಾದ್ಯಂತ 24ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು  ಹೇಳಿದ್ದಾರೆ. ಈ ಪೈಕಿ ಲಖನೌ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದರೆ, ಬುಲಂದ್ ಶಹರ್ ಬಳಿ ನಡೆದ ಮತ್ತೊಂದು ಅಪಘಾತದಲ್ಲಿ ಬರೊಬ್ಬರಿ 9 ಮಂದಿ ಅಸುನೀಗಿದ್ದಾರೆ.  ಎರಡೂ ಅಪಘಾತದಲ್ಲಿ ಚಾಲಕರ ಅತಿಯಾದ ಕುಡಿತವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಇನ್ನು ರಾಜ್ಯದಲ್ಲಿ ಹೋಳಿ ಆಚರಣೆ ವೇಳೆ ವಿವಿಧೆಡ ಸಂಭವಿಸಿದ ಗುಂಪುಘರ್ಷಣೆಗಳ ಕುರಿತು ದೂರುಗಳ ದಾಖಲಾಗಿದ್ದು, ಇಲ್ಲಿಯೂ ಕೂಡ ಸಾಕಷ್ಟು ಸಾವುಗಳು ಸಂಭಿವಿಸಿವೆ. ಆದರೆ ನಿಖರ  ಅಂಕಿ ಅಂಶ ಇನ್ನಷ್ಟೇ ಹೊರಬೀಳಬೇಕಿದೆ. ಅಪಘಾತ ಮತ್ತು ಗುಂಪುಘರ್ಷಣೆಯಿಂದ ಸುಮಾರು 252ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವರು  ಗಂಭೀರವಾಗಿದ್ದರ, ಮತ್ತೆ ಕೆಲವರು ಸಣ್ಣ ಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತೀ ವರ್ಷ ಹೋಳಿ ಆಚರಣೆ ವೇಳೆ ಅಪಘಾತ ಮತ್ತು ಗುಂಪುಘರ್ಷಣೆಯಿಂದಾಗಿ ಉತ್ತರ ಪ್ರದೇಶದಲ್ಲಿ ಹತ್ತಾರು ಮಂದಿ ಸಾವನ್ನಪ್ಪುತ್ತಾರೆ. ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗಿರುವುದು  ಪೊಲೀಸರು ಆತಂಕಕ್ಕೆ ಕಾರಣವಾಗಿದೆ. ತೀವ್ರ ಭದ್ರತೆ ಮತ್ತು ರಸ್ತೆಗಳಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಿದ್ದರೂ ಸಾವಿನಸಂಖ್ಯೆ ಈ ಪರಿ ಹೆಚ್ಚಿರುವ ಕುರಿತು ಉತ್ತರ ಪ್ರದೇಶ  ಪೊಲೀಸ್ ನಿರ್ದೇಶಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!