ಬಾಬಾ ರಾಮದೇವ್ 
ದೇಶ

ಉತ್ತರಾಖಂಡ್ ಬಿಕ್ಕಟ್ಟು: ಸೋನಿಯಾ, ರಾಹುಲ್ ವಿರುದ್ಧ ರಾಮದೇವ್ ವಾಗ್ದಾಳಿ

ಉತ್ತರಾಖಂಡದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಯೋಗಗುರು ಬಾಬಾ ರಾಮದೇವ್ ಅವರು ಕಾರಣ ಕಾಂಗ್ರೆಸ್ ಆರೋಪವನ್ನು...

ನವದೆಹಲಿ: ಉತ್ತರಾಖಂಡದಲ್ಲಿನ ರಾಜಕೀಯ ಬಿಕ್ಕಟ್ಟಿಗೆ ಯೋಗಗುರು ಬಾಬಾ ರಾಮದೇವ್ ಅವರು ಕಾರಣ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿರುವ ರಾಮದೇವ್, ಕಾಂಗ್ರೆಸ್ ಬಂಡಾಯದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಯೋಗ ಗುರು, ಕಾಂಗ್ರೆಸ್ ಬಂಡಾಯ ಶಾಸಕರಿಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಬಾಬಾ ರಾಮದೇವ್, ನಾನು ಏನೇ ಮಾಡಿದರು, ಹೇಳಿದರೂ ಅದನ್ನು ಬಹಿರಂಗವಾಗಿ ಮಾಡುತ್ತೇನೆ. ರಾಜಯಕೀಯ ನನ್ನ ಆಸಕ್ತಿಯಲ್ಲ. ಸೋನಿಯಾ ಹಾಗೂ ರಾಹುಲ್ ಗಾಂಧಿ ತಮ್ಮ ತಮ್ಮ ಕೆಲಸಗಳ ಬಗ್ಗೆ ಗಮನ ಹರಿಸಲಿ ಎಂದಿದ್ದಾರೆ.
ಉತ್ತರಾಖಂಡದಲ್ಲಿ ಹರೀಶ್ ರಾವತ್ ಸರ್ಕಾರ ಉರುಳಿಸಲು ರಾಮದೇವ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಂಚು ರೂಪಿಸಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್​ನ 9 ಶಾಸಕರು ರಾವತ್ ವಿರೋಧಿಸಿ ಸರ್ಕಾರದಿಂದ ಹೊರನಡೆದಿದ್ದಾರೆ. ಅಲ್ಲದೆ ಬಿಜೆಪಿ ಜತೆ ಸೇರಿ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಇದಕ್ಕೆ ರಾಮದೇವ್ ಮತ್ತು ಅಮಿತ್ ಷಾ ಕಾರಣವೆಂದು ರಾಜ್ಯ ಕಾಂಗ್ರೆಸ್ ನಾಯಕ ಕಿಶೋರ್ ಉಪಾದ್ಯಾಯ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ