ಪರೇಡ್ ಬಜಾರ್'ನಲ್ಲಿ ಅಗ್ನಿ ಅವಘಡ: ಮಗು ಸಾವು, 100 ಅಂಗಡಿಗಳು ಭಸ್ಮ
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿರುವ ಪರೇಡ್ ಬಜಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಮಗುವೊಂದು ಸಾವನ್ನಪ್ಪಿ 100 ಅಂಗಡಿಗಳು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ...
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿರುವ ಪರೇಡ್ ಬಜಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಮಗುವೊಂದು ಸಾವನ್ನಪ್ಪಿ 100 ಅಂಗಡಿಗಳು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಪರೇಡ್ ಬಜಾರ್ ನಲ್ಲಿನ ಸುತ್ತಮುತ್ತಲೂ ಹೊಗೆ ತುಂಬಿಕೊಂಡಿದೆ. ಅಗ್ನಿಯ ನರ್ತನ ಮುಂದುವರೆಯುತ್ತಲೇ ಇದ್ದು, ಈ ವರೆಗೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಅವಘಡ ಅಲ್ಲಿನ ಸ್ಥಳೀಯರಿಗೆ ಸಾಕಷ್ಟು ಸಮಸ್ಯೆಯನ್ನುಂಟು ಮಾಡಿದೆ ಎಂದು ತಿಳಿದುಬಂದಿದೆ.
ಇದೀಗ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು 20 ಕ್ಕೂ ಹೆಚ್ಚು ವಾಹನಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಈ ವರೆಗೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.