ವಿಶಾಖಪಟ್ಟಣಂ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಪಶುಪತಿ ಆನಂದ ಗಜಪತಿ ರಾಜು ಶನಿವಾರ ನಿಧನರಾಗಿದ್ದಾರೆ.
ಕೇಂದ್ರ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರು ಸಹೋದರ ಆನಂದ ಗಜಪತಿ ರಾಜು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಆನಂದ ಗಜಪತಿ ರಾಜು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನರಾಗಿದ್ದಾರೆ.
ಆನಂದ ಗಜಪತಿ ರಾಜು ಎರಡು ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾನ್ಸಾಸ್ ಟ್ರಸ್ಟ್ ಮತ್ತು ಸಿಂಹಾಚಲದಲ್ಲಿರುವ ಶ್ರೀ ವರಹಾ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು. ಅಮೆರಿಕ ಹಾಗೂ ಆಂಧ್ರ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ ಪಡೆದಿದ್ದರು.