ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಣ್ಮರೆಯಾಗಿರುವ ಯೋಧ ಬದುಕಿರುವ ಸಾಧ್ಯತೆ ಇಲ್ಲ: ಸೇನಾ ಮೂಲಗಳ ಮಾಹಿತಿ

ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸಿಯಾಚಿನ್ ನಲ್ಲಿ ಶುಕ್ರವಾರ ಸಂಭವಿಸಿದ ಹಿಮಾಪಾತದಲ್ಲಿ ನಾಪತ್ತೆಯಾಗಿರುವ ಯೋಧ ಬದುಕಿರುವ ಸಾಧ್ಯತೆಗಳಿಲ್ಲ ಎಂದು ಸೇನಾ ಮೂಲಗಳು ಮಾಹಿತಿ...

ಕಣ್ಮರೆಯಾಗಿರುವ ಯೋಧ ಬದುಕಿರುವ ಸಾಧ್ಯತೆ ಇಲ್ಲ: ಸೇನಾ ಮೂಲಗಳ ಮಾಹಿತಿ
Manjula VN
Updated On : 26 Mar 2016, 9:59 am

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸಿಯಾಚಿನ್ ನಲ್ಲಿ ಶುಕ್ರವಾರ ಸಂಭವಿಸಿದ ಹಿಮಾಪಾತದಲ್ಲಿ ನಾಪತ್ತೆಯಾಗಿರುವ ಯೋಧ ಬದುಕಿರುವ ಸಾಧ್ಯತೆಗಳಿಲ್ಲ ಎಂದು ಸೇನಾ ಮೂಲಗಳು ಮಾಹಿತಿ ನೀಡಿದೆ.

 ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸಿಯಾಚಿನ್ ನಲ್ಲಿ ಭಾರತದ ಇಬ್ಬರು ಯೋಧರು ಗಸ್ತು ತಿರುಗುತ್ತಿದ್ದರು. ಈ ವೇಳೆ ಹಿಮಪಾತ ಸಂಭವಿಸಿತ್ತು. ಹಿಮದ ಮಧ್ಯೆ ಇಬ್ಬರು ಯೋಧರು ಕಣ್ಮರೆಯಾಗಿದ್ದರು. ಕಾರ್ಯಾಚರಣೆ ನಡೆಸಿದ್ದ ಸೇನಾ ಸಿಬ್ಬಂದಿಗಳು ಓರ್ವ ಯೋಧನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹುತಾತ್ಮರಾಗಿದ್ದರು.

ಇದೀಗ ಮತ್ತೊಬ್ಬ ಯೋಧನಿಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಯೋಧ ಬದುಕುಳಿದಿರುವ ಸಾಧ್ಯತೆಗಳು ತೀರಾ ಕಡಿಮೆ ಇದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments