ಛೋಟಾ ರಾಜನ್‌ 
ದೇಶ

ಛೋಟಾ ರಾಜನ್ ವಿರುದ್ಧ ಎರಡು ಪ್ರಕರಣ ದಾಖಲಿಸಿ ಸಿಬಿಐ

ಇಂಡೋನೇಷ್ಯಾದ ಬಾಲಿಯಲ್ಲಿ ಬಂಧನಕ್ಕೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್‌ ವಿರುದ್ಧ ಸಿಬಿಐ ಮತ್ತೆ ಎರಡು ಪ್ರಕರಣಗಳನ್ನು ದಾಖಲಿಸಿದೆ.

ನವದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ಬಂಧನಕ್ಕೊಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್‌ ವಿರುದ್ಧ ಸಿಬಿಐ ಮತ್ತೆ ಎರಡು ಪ್ರಕರಣಗಳನ್ನು ದಾಖಲಿಸಿದೆ.
ಒಂದು ವಿರೋಧಿ ಬಣದ ಮೇಲೆ ನಡೆಸಿದ್ದ ಭೆಂಡಿ ಬಜಾರ್‌ ಶೂಟ್ ಔಟ್ ಪ್ರಕರಣಕ್ಕೆ ಸಂಬಂಧಿಸಿದ್ದರೆ ಮತ್ತೊಂದು  ಮುಂಬೈ ಉದ್ಯಮಿ ಉದ್ಯಮಿಯ ಹತ್ಯೆ ಯತ್ನಕ್ಕೆ ಸಂಬಂಧಿಸಿದ್ದಾಗಿದೆ. 2010 ರ ಫೆಬ್ರವರಿಯಲ್ಲಿ ನಡೆದಿದ್ದ ಶೂಟ್ ಔಟ್ ಪ್ರಕರಣದಲ್ಲಿ ಶಕೀಲ್ ಮೊಡಾಕ್ ಮತ್ತು ಇರ್ಫಾನ್ ಖುರೇಷಿ ಸಾವನ್ನಪ್ಪಿದ್ದರು ಹಾಗೂ ಆಸಿಫ್ ಎಂಬಾತ ಮೃತಪಟ್ಟಿದ್ದ.
ಈ ಪ್ರಕರಣದಲ್ಲಿ  ಛೋಟಾ ರಾಜನ್ ಸೇರಿದಂತೆ ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ಛೋಟಾ ರಾಜನ್ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣ ಮುಂಬೈ ನ ಉದ್ಯಮಿ ಬಿಆರ್ ಶೆಟ್ಟಿ ಹತ್ಯೆಗೆ ಯತ್ನಿಸಿದ್ದಾಗಿದೆ. ಅಕ್ಟೋಬರ್ 2012 ರಲ್ಲಿ ಉದ್ಯಮಿ ಬಿಆರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಯತ್ನ ನಡೆದಿತ್ತು, ಬೈಕ್ ನಲ್ಲಿ ಬಂದಿದ್ದ ಇಬ್ಬರು ಶೂಟರ್ ಗಳು ರಾಜನ್ ಸಂಪರ್ಕ ಹೊಂಡಿದ್ದರೆಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣವನ್ನು ಅಂಬೋಲಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಈಗ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ