ಸಾಂದರ್ಭಿಕ ಚಿತ್ರ 
ದೇಶ

ಇಬ್ಬರು ಅಭ್ಯರ್ಥಿಗಳನ್ನು ಡಿಬಾರ್ ಮಾಡಿದ ಜೆಎನ್ ಯು

ಉಪನ್ಯಾಸಕರ ನೇಮಕಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ದೂರು ದಾಖಲಿಸಿದ್ದ ಇಬ್ಬರು ಅಭ್ಯರ್ಥಿಗಳನ್ನು...

ನವದೆಹಲಿ: ಉಪನ್ಯಾಸಕರ ನೇಮಕಾತಿ ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ದೂರು ದಾಖಲಿಸಿದ್ದ ಇಬ್ಬರು ಅಭ್ಯರ್ಥಿಗಳನ್ನು ಜೆಎನ್ ಯು ಡಿಬಾರ್ ಗೊಳಿಸಿದೆ.

ಜೆಎನ್ ಯುನಲ್ಲಿ ಪ್ರೊಫೆಸರ್ ಹುದ್ದೆಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಮಹಿಳಾ ಅಭ್ಯರ್ಥಿ ದೂರು ದಾಖಲಿಸಿ, ಪುರುಷ ಅಭ್ಯರ್ಥಿಯೊಬ್ಬ ಈ ಹುದ್ದೆಗೆ ಅನರ್ಹ ಎಂದು ದೂರಿದ್ದರು. ಆ ಮಹಿಳೆ ವಿರುದ್ಧ ಪುರುಷ ಅಭ್ಯರ್ಥಿಯೂ ಪ್ರತಿದೂರು ದಾಖಲಿಸಿದ್ದರು.

ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ ತನಿಖಾ ಸಮಿತಿಯನ್ನು ಕಳೆದ ನವೆಂಬರ್ ನಲ್ಲಿ ರಚಿಸಿತ್ತು. ಕಳೆದ ವಾರ ನಡೆದ ಎಕ್ಸಿಕ್ಯೂಟಿವ್ ಮೀಟಿಂಗ್ ನಲ್ಲಿ ಇಬ್ಬರು ಅಭ್ಯರ್ಥಿಗಳು ಐದು ವರ್ಷಗಳ ಕಾಲ ಡೀಬಾರ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.

ಈ ಇಬ್ಬರು ಅಭ್ಯರ್ಥಿಗಳು ಐದು ವರ್ಷಗಳ ವರೆಗೆ ವಿಶ್ವವಿದ್ಯಾಲಯದಲ್ಲಿ ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಹಕ್ಕು ಹೊಂದಿರುವುದಿಲ್ಲ. ವಿಶ್ವವಿದ್ಯಾಲಯದ ಈ ಕ್ರಮವನ್ನು ಇಬ್ಬರು ಅಭ್ಯರ್ಥಿಗಳು ಖಂಡಿಸಿದ್ದಾರೆ. ಅಕ್ರಮದ ಬಗ್ಗೆ ಧನಿ ಎತ್ತಿದಕ್ಕೆ ಡಿಬಾರ್ ಮಾಡಲಾಗಿದೆ ಎಂದು ಮಹಿಳಾ ಅಭ್ಯರ್ಥಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT