ಛತ್ತೀಸ್ ಗಢ 
ದೇಶ

ಛತ್ತೀಸ್ ಗಢದಲ್ಲಿ ಮತ್ತೋರ್ವ ಪತ್ರಕರ್ತನ ಬಂಧನ

ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಪತ್ರಕರ್ತನೋಬ್ಬನನ್ನು ಬಂಧನದ ನಂತರ ಕೆಲವೇ ದಿನಗಳಲ್ಲಿ ಮತ್ತೊಬ್ಬ ಪತ್ರಕರ್ತನನ್ನು ಬಂಧಿಸಲಾಗಿದೆ.

ರಾಯ್ಪುರ: ವಾಟ್ಸ್ ಆಪ್ ನಲ್ಲಿ ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಪತ್ರಕರ್ತನೋಬ್ಬನನ್ನು ಬಂಧನದ ನಂತರ ಕೆಲವೇ ದಿನಗಳಲ್ಲಿ ಮತ್ತೊಬ್ಬ ಪತ್ರಕರ್ತನನ್ನು ಬಂಧಿಸಲಾಗಿದೆ.  
ಏಳು ತಿಂಗಳ ಹಿಂದೆ ದಾಖಲಾಗಿದ್ದ ಪ್ರಕರಣದ ಬಗ್ಗೆ ಈಗ ಕಾರ್ಯಾಚರಣೆ ನಡೆಸಿದ ಪೊಲೀಸರು ಪತ್ರಕರ್ತ ದೀಪಕ್ ಜೈಸ್ವಾಲ್ ನನ್ನು ಬಂಧಿಸಿದ್ದಾರೆ. 7 ತಿಂಗಳ ಹಿಂದೆ ಛತ್ತೀಸ್ ಗಢದ ಪ್ರೌಢ ಶಾಲೆ  ಪ್ರಾಂಶುಪಾಲ ರಂಜಿತ್ ಟಿಕಮ್ ದಾಖಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ದೀಪಕ್ ಜೈಸ್ವಾಲ್ ನನ್ನು ಬಂಧಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಪೊಲೀಸರು ಪತ್ರಕರ್ತರನ್ನು ಬಂಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೇ.2015 ರಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಅನುಮತಿ ಇಲ್ಲದೇ ಪರೀಕ್ಷಾ ಕೊಠಡಿಗೆ ತೆರಳಿದ್ದ ಜೈಸ್ವಾಲ್ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪತ್ರಕರ್ತನ ಹಿನ್ನೆಲೆ ಬಗ್ಗೆ ವಿಚಾರಣೆ ನಡೆಸಿರುವ ಪೊಲೀಸರು ಬಂಧಿತ 2014 ರಲ್ಲಿ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿಸಿದ್ದಾರೆ. ಬಂಧಿತ ಪತ್ರಕರ್ತನ ವಿರುದ್ಧ ಐಪಿಸಿ ಸೆಕ್ಷನ್ 448 , 385 , 353 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!