ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಬಜೆಟ್ ಇಂದು: ಶಿಕ್ಷಣ, ಸಾರಿಗೆಗೆ ಹೆಚ್ಚಿನ ಒತ್ತು ಸಾಧ್ಯತೆ

ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಾದ-ವಿವಾದಗಳನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೆಹಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ಬಜೆಟ್ ಮಂಡನೆ ಮಾಡಲಿದ್ದು...

ನವದೆಹಲಿ: ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಾದ-ವಿವಾದಗಳನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೆಹಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರ ಸೋಮವಾರ ಬಜೆಟ್ ಮಂಡನೆ ಮಾಡಲಿದ್ದು, ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಸಾರಿಗೆ ಕ್ಷೇತ್ರಗಳ ಮೇಲೆ ಹೆಚ್ಚಿನ ಒತ್ತು ನೀಡಿದೆ ಎಂದು ಹೇಳಲಾಗುತ್ತಿದೆ.

2016-17 ಸಾಲಿನ ಬಜೆಟ್ ನ್ನು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇಂದು ದೆಹಲಿ ವಿಧಾನಸಭೆಯಲ್ಲಿ ಮಂಡಿಸಲಿದ್ದು, ಬಜೆಟ್ ಮಂಡನೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿಯ ಬಜೆಟ್ ಸಾರ್ವಜನಿಕರಿಗೆ ಲಾಭಕರವಾಗಲಿದೆ ಎಂದು ಹೇಳಲಾಗುತ್ತಿದ್ದು, ಬಟ್ಟೆ, ಶೂ ಹಾಗೂ ಇನ್ನಿತರೆ ಬಳಕೆಯ ವಸ್ತುಗಳ ಮೇಲಿನ ತೆರಿಗೆಯಲ್ಲಿ ವಿನಾಯಿತಿ ದೊರಯಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ.25 ರಷ್ಟು ಭಾಗ ಮೀಸಲಿಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ 2015-16ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದ ಸಿಸೋಡಿಯಾ ಅವರು ಶಿಕ್ಷಣ ಕ್ಷೇತ್ರಕ್ಕೆ ರು. 9,836 ಕೋಟಿ ಹಣವನ್ನು ನೀಡಿದ್ದರು. ಇದೀಗ ಕಳೆದ ಬಾರಿ ಬಜೆಟ್ ಗಿಂತ ಹೆಚ್ಚಿನ ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಇನ್ನು ಸಾರಿಗೆ ಕ್ಷೇತ್ರದಲ್ಲೂ ಹೆಚ್ಚಿನ ಮೀಸಲಿಡಲು ಚಿಂತನೆ ನಡೆಸಿರುವ ದೆಹಲಿ ಸರ್ಕಾರ, 1,000ಕ್ಕೂ ಹೆಚ್ಚು ಹವಾನಿಯಂತ್ರಿತ ಹೊಸ ಬಸ್ಸುಗಳನ್ನು ಹೊರತರಲು ಚಿಂತನೆ ನಡೆಸಿದೆ. ಅಲ್ಲದೆ, ತಮಿಳುನಾಡಿನಲ್ಲಿ ನಾಗರಿಕರಿಗೆ ಉತ್ತಮ ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ಸಲುವಾಗಿ ತೆರೆಯಲಾಗಿರುವ ಅಮ್ಮ ಕ್ಯಾಂಟೀನ್ ಯೋಜನೆಯಂತೆಯೇ ದೆಹಲಿಯಲ್ಲಿಯೂ ಆಮ್ ಆದ್ಮಿ ಕ್ಯಾಂಟೀನ್ ತೆರೆಯಲು ಚಿಂತನೆ ನಡೆಸಿರುವ ಆಪ್ ಸರ್ಕಾರ ಇದಕ್ಕಾಗಿ ರು.50 ಕೋಟಿ ಹಣವನ್ನು ಮೀಸಲಿರಿಸಲಿದೆ ಎಂದು ತಿಳಿದುಬಂದಿದೆ.

ಇನ್ನು ಕಳೆದ ಬಾರಿ ಮಂಡನೆ ಮಾಡಲಾಗಿದ್ದ ಹೊಸ ಮಸೂದೆಗಳ ಜಾರಿ ಇನ್ನು ಪ್ರಗತಿಯಲ್ಲಿದ್ದು, ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಹೊಸ ಮಸೂದೆಗಳು ಮಂಡನೆಯಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಕಳೆದ ಬಾರಿ ಮಂಡನೆ ಪ್ರಸ್ತುತ ಪಡಿಸಲಾಗಿರುವ ಮಸೂದೆಗಳು ಈ ವರೆಗೂ ಜಾರಿಯಾಗಿಲ್ಲ. ಇನ್ನು ಈ ಬಾರಿಯ ಬಜೆಟ್ ನಲ್ಲಿ ಹೊಸ ಮಸೂದೆಗಳನ್ನು ಮಂಡಿಸಿದರೆ ಪ್ರಯೋಜನವಿಲ್ಲ. ಹೀಗಾಗಿ ಈ ಬಾರಿಯ ಬಜೆಟ್ ನಲ್ಲಿ ಹೊಸ ಮಸೂದೆಗಳನ್ನು ಮಂಡನೆ ಮಾಡಲಾಗುವುದಿಲ್ಲ ಎಂದು ಸಿಸೋಡಿಯಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ