ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ (ಸಂಗ್ರಹ ಚಿತ್ರ) 
ದೇಶ

ಬ್ರುಸೆಲ್ಸ್ ಸರಣಿ ಸ್ಫೋಟದಲ್ಲಿ ಟೆಕ್ಕಿ ಸಾವು: ಸಂತಾಪ ವ್ಯಕ್ತಪಡಿಸಿದ ಜಯಲಲಿತಾ

ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ...

ಚೆನ್ನೈ: ಬ್ರುಸೆಲ್ಸ್ ನಲ್ಲಿ ಕೆಲವು ದಿನಗಳ ಹಿಂದಷ್ಟೇ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿರುವ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರ ಗಣೇಶನ್ ಅವರ ಸಾವಿಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಮಾರ್ಚ್ 22ರಂದು ಬ್ರಸಲ್ಸ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿ 300 ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟದ ನಡೆದ ಬಳಿಕ ರಾಘವೇಂದ್ರನ್ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಇದರಂತೆ ಸ್ಫೋಟದಲ್ಲಿ ಗಣೇಶನ್ ಕೂಡ ಸಾವನ್ನಪ್ಪಿದ್ದಾರೆಂದು ಬ್ರುಸೆಲ್ಸ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಖಚಿತ ಪಡಿಸಿತ್ತು.

ಇದೀಗ ಗಣೇಶನ್ ಅವರ ಸಾವಿಗೆ ಜಯಲಲಿತಾ ಅವರು ಸಂತಾಪ ಸೂಚಿಸಿದ್ದು, ತಮಿಳುನಾಡು ಜಾಗತಿಕ ಸಮುದಾಯದಲ್ಲಿ ಗಣೇಶನ್ ಅವರು ಶ್ರಮ ಜೀವಿಯಾಗಿ ದುಡಿಯುತ್ತಿದ್ದರು. ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರು ಗಣೇಶನ್ ಅವರ ಸಾವು ನಿಜಕ್ಕೂ ದುರಂತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!