ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಭಾರತದಲ್ಲಿ ಹೂಡಿಕೆ ಮಾಡುವಂತೆ ಅಲ್ಲಿನ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.
ನ್ಯೂ ಸೌತ್ ವೇಲ್ಸ್ ನ ಪ್ರೀಮಿಯರ್ ಮೈಕ್ ಬೇರ್ಡ್ ಅವರನ್ನು ಭೇಟಿ ಮಾಡಿರುವ ಅರುಣ್ ಜೇಟ್ಲಿ, ಭಾರತ ಆರ್ಥಿಕ ಬೆಳವಣಿಗೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜೇಟ್ಲಿ ಹೇಳಿದ್ದಾರೆ.
ಜೇಟ್ಲಿ ಅವರೊಂದಿಗಿನ ಮಾತುಕತೆ ಬಳಿಕ ಮಾತನಾಡಿದ ಬೇರ್ಡ್, ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಅವಕಾಶಗಳನ್ನು ಎದುರುನೋಡುತ್ತಿರುವುದಾಗಿ ತಿಳಿಸಿದ್ದಾರೆ.