ಡೆಹ್ರಾಡೂನ್: ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಬಹುಮತ ಸಾಬೀತಿಗೆ ಅವಕಾಶ ನೀಡಿರುವ ಉತ್ತರಾಖಂಡ್ ಹೈಕೋರ್ಟ್ ಆದೇಶವನ್ನು ಉತ್ತರಾಖಂಡ್ ನಿರ್ಗಮಿತ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಸ್ವಾಗತಿಸಿದ್ದಾರೆ.
ತಮ್ಮ ಸರ್ಕಾರ ಉಳಿಸಿಕೊಳ್ಳಲು ಒಂದು ಅವಕಾಶ ನೀಡಿರುವ ಕೋರ್ಟ್ ಆದೇಶವನ್ನು ಸ್ವಾಗತಿಸಿದ ರಾವತ್, ಮಾರ್ಚ್ 31ಕ್ಕೆ ಬಹುಮತ ಸಾಬೀತುಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡ್ ಹೈಕೋರ್ಟ್ ಆದೇಶದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾವತ್, ಕೋರ್ಟ್ ಆದೇಶದಿಂದ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದವರಿಗೆ ಮುಖಭಗವಾಗಿದೆ ಎಂದರು. ಅಲ್ಲದೆ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ ಶಾಸಕರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.
ಇದೇ ವೇರೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿದ ಕೇಂದ್ರದ ನಿರ್ಧಾರವನ್ನು ಖಂಡಿಸಿದ ರಾವತ್, ಇದು ಉತ್ತರಾಖಂಡ್ ಜನತೆ ಮೇಲೆ ಕೆಟ್ಟ ಪರಿಣಾಮ ಬೀರಿದೆ ಎಂದರು.
ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ಇಂದು ತಡೆ ನೀಡಿರುವ ನೈನಿತಾಲ್ ಹೈಕೋರ್ಟ್, ಮಾರ್ಚ್ 31ಕ್ಕೆ ಬಹುಮತ ಸಾಬೀತುಪಡಿಸುವಂತೆ ಹರೀಶ್ ರಾವತ್ ಅವರಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics