ರಾಯ್ಪುರ: ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶ ಬಿಜಾಪುರ್ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡು ಇಬ್ಬರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ನಕ್ಸಲ್ ಪೀಡಿ ಪ್ರದೇಶವಾಗಿರುವ ಬಸಗುಂದ-ಸರ್ಕೆಗ್ಡದ ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಆರ್ ಪಿಎಫ್ ಯೋಧರು ಗಸ್ತು ತಿರುಗುತ್ತಿದ್ದರು. ಈ ಸಮಯದಲ್ಲಿ ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟಗೊಂಡಿದೆ. ಪರಿಣಾಮ ಗಸ್ತಿನಲ್ಲಿದ್ದ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೀರಜ್ ಕುಮಾರ್ ಮತ್ತು ಮನೀಶ್ ಸಿಆರ್ ಪಿಎಫ್ 168 ಬೆಟಾಲಿಯನ್ ಗಸ್ತು ಪಡೆಗೆ ಸೇರಿದ ಇಬ್ಬರು ಯೋಧರಾಗಿದ್ದು, ಘಟನೆ ವೇಳೆ ಇಬ್ಬರು ಯೋಧರು ಸ್ಫೋಟದಲ್ಲಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಗಾಯಗೊಂಡ ಯೋಧರನ್ನು ರಾಯ್ಪುರಕ್ಕೆ ಕಳುಹಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.