ಉದ್ಧವ್ ಠಾಕ್ರೆ 
ದೇಶ

ರಾಷ್ಟ್ರಪತಿ ಆಡಳಿತ ಜಾರಿ: ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿರುವ ಬಿಜೆಪಿ-ಶಿವಸೇನಾ ಕಿಡಿ

ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವ ಬಿಜೆಪಿ ಸರ್ಕಾರದ ಕ್ರಮವನ್ನು ಶಿವಸೇನಾ...

ಮುಂಬೈ: ಉತ್ತರಾಖಂಡ್ ನಲ್ಲಿ ರಾಷ್ಟ್ರಪತಿ ಆಡಳಿತ ಹೇರಿರುವ ಬಿಜೆಪಿ ಸರ್ಕಾರದ ಕ್ರಮವನ್ನು ಶಿವಸೇನಾ ಖಂಡಿಸಿದೆ.
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಪ್ರಯತ್ನ ನಡೆಯುತ್ತಿದೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ  ಹೇಳಿದೆ. 
ನೈತಿಕತೆ ಹೆಸರಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಇದೇ ರೀತಿ ಬಿಜೆಪಿ ತನ್ನ ಉದ್ಧಟತನ ಮುಂದುವರೆಸಿದರೆ, ದೇಶದಲ್ಲಿ ಅಸ್ಥಿರತೆ ಮತ್ತು ಅರಾಜಕತೆ ಹೆಚ್ಚಾಗುತ್ತಾ ಹೋಗುತ್ತದೆ ಎಂದು ಶಿವಸೇನಾ ಕಿಡಿಕಾರಿದೆ. 
ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ತಾತ್ಕಾಲಿಕ ಹಾಗೂ ಕಡ್ಡಾಯ ರಾಜಕೀಯಕ್ಕಾಗಿ. ಇದರಲ್ಲಿ ನೈತಿಕತೆ ಅಥವಾ ಅನೈತಿಕತೆ ಎಂಬ ಪ್ರಶ್ನೆಯೇ ಇಲ್ಲ ಎಂದು ಶಿವಸೇನಾ ಹೇಳಿದೆ. 
ಉತ್ತರಾಖಂಡ್ ನಲ್ಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ, ಕಾಂಗ್ರೆಸ್ ನ 9 ಭಿನ್ನಮತಿಯರ ಶಾಸಕರನ್ನು ಬಳಸಿಕೊಂಡಿದೆ ಎಂದು ಶಿವಸೇನಾ ತನ್ನ ಸಾಮ್ನಾ ಪತ್ರಿಕೆಯ ಮುಖವಾಣಿಯಲ್ಲಿ ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್