ಕುಸಿದುಬಿದ್ದಿರುವ ಫ್ಲೈ ಓವರ್ 
ದೇಶ

ಫ್ಲೈ ಓವರ್ ದುರಂತ ದುರ್ದೈವದ ಸಂಗತಿ: ಐವಿಆರ್ ಸಿಎಲ್ ಕಂಪನಿ

ಕೋಲ್ಕತಾದ ವಿವಾಕಾನಂದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿರುವುದು ದುರ್ದೈವ ಎಂದು ಫ್ಲೈ ಓವರ್ ನಿರ್ಮಾಣ ಕಾರ್ಯದಲ್ಲಿ ಒಪ್ಪಂದ ಮಾಡಿಕೊಂಡಿದ್ದ...

ಹೈದರಾಬಾದ್: ಕೋಲ್ಕತಾದ ವಿವಾಕಾನಂದ ಫ್ಲೈ ಓವರ್ ಕುಸಿದು ಬಿದ್ದಿರುವ ಘಟನೆ ನಡೆದಿರುವುದು ದುರ್ದೈವ ಎಂದು ಫ್ಲೈ ಓವರ್ ನಿರ್ಮಾಣ ಕಾರ್ಯದಲ್ಲಿ ಒಪ್ಪಂದ ಮಾಡಿಕೊಂಡಿದ್ದ ಮೂಲಭೂತ ವ್ಯವಸ್ಥಾ ಐವಿಆರ್ ಸಿಎಲ್ ಕಂಪನಿ ಗುರುವಾರ ಹೇಳಿದೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಐವಿಆರ್ ಸಿಎಲ್ ಕಂಪನಿಯ ಮುಖ್ಯಸ್ಥ ಕೆ. ಪಾಂಡುರಂಗ ರಾವ್ ಅವರು, ಪಶ್ಚಿಮ ಬಂಗಾಳ ಸರ್ಕಾರ ನಮಗೆ ಈ ಕೆಲಸವನ್ನು ವಹಿಸಿತ್ತು. ನಾವು ಈ ಕೆಲಸವನ್ನು ಮಾಡುತ್ತಿದ್ದೇವೆ. ಈಗಾಗಲೇ ಇದರ ನಿರ್ಮಾಣ ಕಾರ್ಯವನ್ನು ಶೇ.60-75 ರಷ್ಟು ಮುಕ್ತಾಯಗೊಳಿಸಲಾಗಿತ್ತು. ಉಳಿದ ಕಾರ್ಯವನ್ನು ಮಾಡಲಾಗುತ್ತಿತ್ತು. ಆದರೆ, ಇಷ್ಟರ ಮಧ್ಯದಲ್ಲೇ ಘಟನೆ ನಡೆದಿರುವುದು ದುರ್ದೈವ ಎಂದು ಹೇಳಿದ್ದಾರೆ.

27 ವರ್ಷಗಳಿಂದ ನಾವು ಸಾಕಷ್ಟು ಸೇತುವೆಗಳನ್ನು ನಿರ್ಮಾಣ ಮಾಡಿದ್ದೇವೆ. ಆದರೆ, ಈ ರೀತಿಯಾಗಿ ಎಂದೂ ಆಗಿಲ್ಲ. ಘಟನೆಯಿಂದ ಸಂಸ್ಥೆಕೂಡ ಆಶ್ಚರ್ಯ ವ್ಯಕ್ತಪಡಿಸಿದೆ. ಫ್ಲೈ ಓವರ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಂಪನಿಯ ಇಬ್ಬರು ಇಂಜಿನಿಯರ್ ಗಳು ಕೂಡ ಕಾಣೆಯಾಗಿದ್ದಾರೆ, ಸೇತುವೆ ಕಾರ್ಯವು ನಿರ್ಮಾಣ ಹಂತದಲ್ಲಿತ್ತು. ನಮಗೆ ತಿಳಿದುಬಂದಿರುವ ಪ್ರಕಾರ. ಸೇತುವೆ ನಿರ್ಮಾಣದ ವೇಳೆ ಕಬ್ಬಿಣದ ತೊಲೆಯೊಂದನ್ನು ಹಾಕಲಾಗಿತ್ತು. ಇದು ಕಾಣೆಯಾಗಿತ್ತು. ಸೇತುವೆ ಕುಸಿತಕ್ಕೆ ಇದೇ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ ಎಂದು ಹೇಳಿದ್ದಾರೆ.

ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದು, ಸುಮಾರು 17 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಅವಶೇಷಗಳಡಿ 150ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆಗಳು ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT