ನರೇಂದ್ರ ಮೋದಿ ಹಾಗೂ ಕುಸಿದು ಬಿದ್ದಿರುವ ವಿವೇಕಾನಂದ ಫ್ಲೈಓವರ್ 
ದೇಶ

ಕೋಲ್ಕತಾ ಫ್ಲೈ ಓವರ್ ದುರಂತ: ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಕೋಲ್ಕತಾದಲ್ಲಿ ಸಂಭವಿಸಿರುವ ಫ್ಲೈ ಓವರ್ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಆಶ್ಚರ್ಯ ಹಾಗೂ ಬೇಸರವನ್ನು ವ್ಯಕ್ತಪಡಿಸಿದ್ದಾರೆ...

ನವದೆಹಲಿ: ಕೋಲ್ಕತಾದಲ್ಲಿ ಸಂಭವಿಸಿರುವ ಫ್ಲೈ ಓವರ್ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಆಘಾತ ಹಾಗೂ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೋಲ್ಕತಾ ಫ್ಲೈ ಓವರ್ ಘಟನೆ ಆಘಾತವನ್ನುಂಟು ಮಾಡಿದ್ದು, ಬೇಸರವನ್ನು ತಂದಿದೆ. ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ, ಅಲ್ಲದೆ, ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನು ಘಟನೆ ಕುರಿತಂತೆ ಟ್ಟಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು, ದುರಂತ ಕುರಿತಂತೆ ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಫೋನಿನ ಮೂಲಕ ಸಂಭಾಷಣೆ ನಡೆಸಲಾಗಿದೆ. ವಿಪತ್ತು ನಿರ್ವಹಣ ಪಡೆ (ಎನ್ ಡಿಆರ್"ಎಫ್) ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಇದರಂತೆ ಈಗಾಗಲೇ ಫ್ಲೈ ಓವರ್ ನ ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆಯನ್ನು ಎನ್ ಡಿಆರ್ ಎಫ್ ಪಡೆ ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT